LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

28ನೇ ರಾಜ್ಯಮಟ್ಟದ ಅಂತರ ಶಾಲಾ “ಬಾಂಧವ ಕೌನ್ಸಿಲರ್ ಕಪ್-2025” ವಾಲಿಬಾಲ್ ಚಾಂಪಿಯನ್ ಶಿಪ್

ಸರ್ಕಾರಿ ಶಾಲಾ ಮಕ್ಕಳಿಗೆ ಹೈಟೆಕ್ ಶಿಕ್ಷಣ, ಕ್ರೀಡೆಗೆ ಪ್ರೋತ್ಸಾಹ: ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸರ್ಕಾರಿ ಶಾಲಾ ಮಕ್ಕಳು ಪದಕ ಗೆಲ್ಲಬೇಕು: ಸಚಿವ ರಾಮಲಿಂಗಾರೆಡ್ಡಿ

ಜಯನಗರ: ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಮೂರು ದಿನಗಳ 28ನೇ ರಾಜ್ಯಮಟ್ಟದ “ಬಾಂಧವ ಕೌನ್ಸಲರ್ ಕಪ್-2025” ಅಂತರ್ ಶಾಲಾ ವಾಲಿಬಾಲ್ ಚಾಂಪಿಯನ್ ಶಿಪ್ ಆರಂಭವಾಗಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಅವಧೂತ ವಿನಯ್ ಗುರೂಜಿ, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸೌಮ್ಯರೆಡ್ಡಿ, ಆಡಳಿತ ಪಕ್ಷದ ಮಾಜಿ ನಾಯಕ, ಬಾಂಧವ ಸಂಸ್ಥೆ ಸಂಸ್ಥಾಪಕ ಎನ್.ನಾಗರಾಜು, ಪದ್ಮನಾಭನಗರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ವಾಲಿಬಾಲ್ ಆಡುವ ಮೂಲಕ ಉದ್ಘಾಟಿಸಿದರು.



ಬಳಿಕ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸಸಿ ಮರವಾಗಬೇಕಾದರೆ ನೀರು, ಬಿಸಿಲು, ನೆರಳು ಇರಬೇಕು. ಅದೇ ರೀತಿ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಉತ್ತಮ ಶಾಲೆ,  ಗುರುಗಳ ಮಾರ್ಗದರ್ಶನ ದೊರೆತರೆ ಉತ್ತಮ ವಿದ್ಯಾರ್ಥಿಯಾಗಿ ರೂಪಗೊಳ್ಳಬಹುದು, ಮಾನಸಿಕ, ದೃಹಿಕವಾಗಿ ಆರೋಗ್ಯವಂತರಾಗಿರಬೇಕು.  ಬಿಟಿಎಂ ಮತ್ತು ಜಯನಗರ ಸರ್ಕಾರಿ ಶಾಲೆಯ ಮಕ್ಕಳಿಗೆ ಹೈಟೆಕ್ ಶಾಲೆ ನಿರ್ಮಿಸಿ, ಶ್ರೀಮಂತರ ಮಕ್ಕಳಿಗೆ ಸಿಗುವ ಶಿಕ್ಷಣ, ಸೌಲಭ್ಯಗಳು ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಗುತ್ತಿದೆ ಎಂದರು.

ಮಕ್ಕಳಿಗೆ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣದಲ್ಲಿ ತರಬೇತಿ ಪಡೆಯಲು ಅನುಕೂಲವಾಗಲಿ ಎಂದು ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಹೆಚ್ಚಿನ ಅನುದಾನ ನೀಡಲಾಗುವುದು. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ, ರಾಷ್ಟ್ರ, ಅಂತಾರಾರಾಷ್ಟ್ರೀಯ ಪದಕ ಗೆಲ್ಲಬೇಕು ಎನ್ನುವ ದೃಷ್ಟಿಯಿಂದ ಎನ್.ನಾಗರಾಜು ಅವರ ಬಾಂಧವ ಸಂಸ್ಥೆ ಶ್ರಮಿಸುತ್ತಿದೆ ಎಂದು ಹೇಳಿದರು.



ಅವಧೂತ ವಿನಯ್ ಗುರೂಜಿ ಮಾತನಾಡಿ, ಮಕ್ಕಳು ದೇವರ ಸಮಾನ. ಅವರನ್ನು ಪ್ರೀತಿ, ವಿಶ್ವಾಸದಿಂದ ಬೆಳಸಬೇಕು, ತಂದೆ, ತಾಯಿ ಮತ್ತು ಸಮಾಜದಿಂದ ಮಕ್ಕಳಿಗೆ ಪ್ರೀತಿ, ವಿಶ್ವಾಸ ಸಿಕ್ಕಾಗ ಮಕ್ಕಳು ಕೆಟ್ಟದಾರಿಗೆ ಹೋಗುವುದಿಲ್ಲ. ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳಸಬೇಕು. ತಂದೆ, ತಾಯಿ ಮತ್ತು ಶಿಕ್ಷಕರು ಮಕ್ಕಳಿಗೆ ಯಾರ ಕ್ರೀಡೆಯಲ್ಲಿ ಆಸಕ್ತಿ ಇದೆ ಎಂಬುದು ತಿಳಿದುಕೊಂಡು ಅದರಲ್ಲಿ ತೊಡಗಿಸಿಕೊಳ್ಳಲು ಪೇರಣೆ ನೀಡಬೇಕು. ಕ್ರೀಡೆಗೆ ಪ್ರೋತ್ಸಹ, ಸಹಕಾರ ಸಿಕ್ಕಾಗ ನಮ್ಮ ಮಕ್ಕಳು ಓಲಿಂಪಿಕ್, ಏಷಿಯನ್ ಗೇಮ್ಸ್ ನಲ್ಲಿ ಪದಕಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. 

ಬಾಂಧವ ಸಂಸ್ಥೆ ಅಧ್ಯಕ್ಷ ಎನ್.ನಾಗರಾಜು ಮಾತನಾಡಿ, ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಪರಿಸರ ಜಾಗೃತಿ ಕುರಿತು ನಮ್ಮ ಸಂಸ್ಥೆ ನಿರಂತರ ಕಾಳಜಿವಹಿಸಿ ಶ್ರಮಿಸುತ್ತಿದೆ. ರಾಜ್ಯಾದ್ಯಂತ 200ಕ್ಕೂ ಹೆಚ್ಚು ಶಾಲೆಗಳ 3500 ವಿದ್ಯಾರ್ಥಿಗಳು  ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ಧಾರೆ ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST