LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆ

ಬಳ್ಳಾರಿ : ಜಿಲ್ಲೆಯ ಎಲ್ಲ ದೇವಾಲಯಗಳ ಭಕ್ತರ ಕಾಣಿಕೆ ಹುಂಡಿಗಳಿಗೆ ಸೂಕ್ತ ಭದ್ರತೆ ಒದಗಿಸಿ, 360 ಡಿಗ್ರಿ ಸಿಸಿಟಿವಿ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವಸ್ಥಾನಗಳ ಹುಂಡಿ ಭದ್ರತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 713 ದೇವಾಲಯಗಳಲ್ಲಿ ಈಗಾಗಲೇ 354 ದೇವಾಲಯಗಳ ಮಾನಿಟರಿಂಗ್ ಪೂರ್ಣಗೊಂಡಿದ್ದು, ಉಳಿದ ದೇವಾಲಯಗಳಲ್ಲೂ ಶೀಘ್ರವೇ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದರು.

ಹುಂಡಿ ಎಣಿಕೆ ಕಾರ್ಯವು ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಬೇಕು. ಕಳ್ಳತನ ಹಾಗೂ ಇತರೆ ಅಕ್ರಮಗಳನ್ನು ತಡೆಯಲು ಡಿಜಿಟಲ್ ರೂಪದಲ್ಲಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಳ್ಳಾರಿಯ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಿಸಿಟಿವಿ ಮಾನಿಟರಿಂಗ್ ಕಾಮಗಾರಿ ಏಳು ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ದೇವಾಲಯಗಳ ಸೂಕ್ತ ಸ್ಥಳಗಳಲ್ಲಿ ಎಲ್ಲರಿಗೂ ಗೋಚರಿಸುವ ರೀತಿಯಲ್ಲಿ ಹುಂಡಿಗಳನ್ನು ಅಳವಡಿಸಿ ಭದ್ರತೆ ಹೆಚ್ಚಿಸಬೇಕು ಎಂದು ಹೇಳಿದರು.

news_1785259300_0_928.webp

 

ಜಿಲ್ಲೆಯಲ್ಲಿ 5 ವರ್ಗ, 5 ಬಿ ವರ್ಗ ಹಾಗೂ 703 ಸಿ ವರ್ಗ ಸೇರಿ ಒಟ್ಟು 713 ದೇವಾಲಯಗಳಿದ್ದು, ಎಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯದಲ್ಲಿ ಸರ್ಕಾರಿ ನೌಕರರಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ರಚಿಸಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಸಂಬಂಧಿತ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು. ಹುಂಡಿ ಎಣಿಕೆ ವೇಳೆ ಕಳ್ಳತನದಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿತ ದೇವಾಲಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ