ಶಿವಾಜಿನಗರ ಇನ್ ಫೆಂಟ್ರಿ ರಸ್ತೆಯಲ್ಲಿರುವ ಗಣೇಶ್ ಬಾಗ್, ಎಸ್.ಎಸ್.ಬಿ.ಎಸ್. ಜೈನ್ ಸಂಘ ಟ್ರಸ್ಟ್, ಭಗವಾನ್ ಮಹಾವೀರ ರಸ್ತೆ, ಇಲ್ಲಿ ಶಿಬಿರ ನಡೆಯುತ್ತಿದ್ದು, ದಿವ್ಯಾಂಗರಿಗೆ ಉಚಿತವಾಗಿ ಪರಿಕರಗಳನ್ನು ಅಳವಡಿಸಲಾಗುತ್ತಿದೆ ಎಂದು ಲಿಂಬ್ ಕ್ಯಾಂಪ್ ಅಧ್ಯಕ್ಷರಾದ ರೋಟರಿ ಜಿ.ಆರ್. ವಸಂತ್ ಕುಮಾರ್ ತಿಳಿಸಿದ್ದಾರೆ.

ಈ ಶಿಬಿರವು ಏಳು ದಿನಗಳ ಕಾಲ ಇರಲಿದ್ದು, ಇಲ್ಲಿಗೆ ಬರುವವರಿಗೆ ಉಚಿತ ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ನ ಮೂರು ನಕಲಿ ಪ್ರತಿಗಳನ್ನು ತರಬೇಕು. ದಿವ್ಯಾಂಗರಿಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಿಬಿರದ ಮಾರ್ಗದರ್ಶಕರಾದ ಗೌತಮ್ ಚಂದ್ ನಹಾರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 9845052554 ಮತ್ತು 9341214915 ಸಂಖ್ಯೆಗೆ ಸಂಪರ್ಕಿಸಬೇಕಿಸುವಂತೆ ಕೋರಲಾಗಿದೆ.