LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ನಾಳೆ ನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ಸಮಾವೇಶ

ಬಳ್ಳಾರಿ :  ನಗರದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ವಿಷಯದ ಹಿನ್ನಲೆಯಲ್ಲಿ ಜ.1 ರಂದು ನಡೆದ ಬ್ಯಾನರ್  ಅಳವಡಿಕೆ ಗಲಾಟೆ ಮತ್ತು ಖಾಸಗಿ ಗನ್ ಮ್ಯಾನ್ ಗಳಿಂದ ನಡೆದ ಪೈರಿಂಗ್ ಘಟನೆಗೆ ಸಂಬಂಧಿಸಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಸತೀಶ್ ರೆಡ್ಡಿ ಬಂಧನಕ್ಕೆ ಆಗ್ರಹಿಸಿ. ನಾಳೆ ನಗರದ ಎಪಿಎಂಸಿ ಆವರಣದಲ್ಲಿ ಬೆಳಿಗ್ಗೆ 10 ಕ್ಕೆ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.  ಇದಕ್ಕಾಗಿ ಭರ್ಜರಿ ಸಿದ್ದತೆ ನಡೆದಿದೆ.



ಎಪಿಎಂಸಿ ಪೊಲೀಸ್ ಠಾಣೆಯ ಎದುರಿನ ರಸ್ತೆಯಲ್ಲಿನ ಧಾನ್ಯ ಸಂಗ್ರಹಣೆಯ ಶೆಡ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗಣ್ಯರಿಗೆ  100*50 ಅಡಿ ಅಳತೆಯ ಎಲ್ ಇ ಡಿ  ಸ್ಟೇಜ್ ನಿರ್ಮಿಸುತ್ತಿದೆ. ಅಲ್ಲದೆ 25 ಸಾವಿರ ಕ್ಕೂ ಹೆಚ್ಚು ಜನ ಕುಳಿತು ನೋಡಲು ಚೇರ್ ಗಳ ವ್ಯವಸ್ಥೆ ಮಾಡಿದೆ.

ಬೆಂಗಳೂರು ರಸ್ತೆಯಿಂದ ಎಪಿಎಂಸಿ ಪ್ರವೇಶ ಮಾಡಿವ ಧ್ವಾರದಿಂದ ವೇದಿಕೆವರೆಗಿನ ರಸ್ತೆಯಲ್ಲಿ ಬಿಜೆಪಿ ಧ್ವಜಗಳು ಸಮಾವೇಶಕ್ಕೆ ಬರುವವರನ್ನು ಸ್ವಾಗತಿಸುತ್ತಿವೆ. ಬಂದವರಿಗೆ ಕುಡಿಯುವ ನೀರು ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ ಎಂದು ಈ ವ್ಯವಸ್ಥೆಯ ಉಸ್ತುವಾರಿ ವಹಿಸಿಕೊಂಡಿರುವ ಬುಡಾ ಮಾಜಿ ಅಧ್ಯಕ್ಷ ಪಿ.ಪಾಲಣ್ಣ, ಬಿಜೆಪಿ ಮುಖಂಡ ತಿಮ್ಮಪ್ಪ  ತಿಳಿಸಿದರು.



ಸಮಾವೇಶಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ, ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ಮೊದಲಾದವರು ಆಗಮಿಸಲಿದ್ದಾರೆಂದು ಇಂದು  ಮಧ್ಯಾಹ್ನ  ಸಮಾವೇಶದ ಸಿದ್ದತೆ ಪರಿಶೀಲನೆ ಮಾಡಿದ ಮುಖಂಡರುಗಳಾದ ಎನ್.ರವಿಕುಮಾರ್,  ಬಿ.ಶ್ರೀರಾಮುಲು, ಜನಾರ್ಧನರೆಡ್ಡಿ, ಸೋಮಶೇಖರರೆಡ್ಡಿ ತಿಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ