LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಅಧಿಕಾರ ದುರುಪಯೋಗ ಪ್ರಕರಣ : ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ನಾಯಕನಹಟ್ಟಿ : ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್‌ರವರು ತಮ್ಮ ಹುದ್ದೆ ದುರುಪಯೋಗ ಪಡಿಸಿಕೊಂಡು ತಮ್ಮ ಪತಿ ಹೆಸರಿಗೆ ಸ್ಥಿರಾಸ್ತಿ ಖಾತೆ ಮಾಡಿಸಲು ಪ್ರಭಾವ ಬೀರಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಸದಸ್ಯತ್ವ ರದ್ದು ಪಡಿಸುವಂತೆ ಕೋರಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎನ್.ಮಹಂತಣ್ಣರವರು ಕರ್ನಾಟಕ ಪುರಸಭೆಗಳ ಆದಿ ನಿಯಮದ ಕಲಂ 16(1)(ಕೆ) ಅಡಿಯಲ್ಲಿ ದೂರು ಸಲ್ಲಿಸಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್‌ರವರು ತಮ್ಮ ಅಧಿಕಾರವನ್ನು ಬಳಸಿಕೊಂಡು ಪತಿ ಆರ್.ಶ್ರೀಕಾಂತ್ ರವರ ಹೆಸರಿಗೆ ನಿವೇಶನದ ಖಾತೆ ಮಾಡಿಸಲು ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಮಂಜುಳರವರ ಪಟ್ಟಣ ಪಂಚಾಯಿತಿ ಸದಸ್ಯತ್ವ ರದ್ದುಪಡಿಸುವಂತೆ ಚಿತ್ರದುರ್ಗದ ಉಪವಿಭಾಗಧಿಕಾರಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ವಿಚಾರಣೆಯಲ್ಲಿ ಮಂಜುಳ ಅವರ ಪತಿ ಆರ್.ಶ್ರೀಕಾಂತ್‌ರವರು ಕೃಷ್ಣನಾಯ್ಕ ಅವರಿಂದ ನಿವೇಶ ಖರೀದಿಸಿದ್ದು, ಕೃಷ್ಣನಾಯ್ಕರವರು ಗ್ರಾಮ ಪಂಚಾಯಿತಿಯ ನಿರ್ಣಯ ಹಾಗೂ ಹರಾಜಿನ ಮೂಲಕ ನಿವೇಶನ ಪಡೆದಿದ್ದರು ಎಂದು ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ನಂತರ ಶ್ರೀಕಾಂತ್‌ರವರು ನಿವೇಶನವನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬ0ಧಿಸಿದ0ತೆ, ಹೈ ಕೋರ್ಟಿನಲ್ಲಿಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಅವರ ಪೀಠ ಲಭ್ಯ ದಾಖಲೆಗಳನ್ನು ಪರಿಗಣಿಸಿ ಉಪವಿಭಾಗಧಿಕಾರಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಮಧ್ಯಾಂತರ ತಡೆಯಾಜ್ಞೆ ನೀಡಿದರು. ಅರ್ಜಿ ವಿಚಾರಣೆಯಲ್ಲಿ ಮಂಜುಳ ಅವರು 2024ರಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಅವರ ಪತಿ ಸಂಬ0ಧಿಸಿದ ಆಸ್ತಿಯನ್ನು 2000ರಲ್ಲಿ ಖರೀದಿಸಿದ್ದರು. 2008 ರಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗಿದ್ದು, 2014ರಲ್ಲಿ ಇ-ಖಾತೆ ಮಾಡಲಾಗಿದೆ ಎಂದು ವಾದಿಸಲಾಯಿತು. ಅಲ್ಲದೆ ಅಧ್ಯಕ್ಷೆಯ ಆದೇಶದ ಮೇರೆಗೆ ನಡೆಯುವ ಯಾವುದೇ ಕಾರ್ಯ ಅಥವಾ ಗುತ್ತಿಗೆಯಲ್ಲಿ ಅವರು ಭಾಗಿಯಾಗಿರುವುದು ದಾಖಲೆಗಳಿಂದ ಕಂಡುಬರುವುದಿಲ್ಲ. ಹೀಗಾಗಿ ಈ ಆರೋಪಗಳು ಸದಸ್ಯತ್ವಕ್ಕೆ ಅನರ್ಹತೆಗೆ ಕಾರಣವಾಗುವುದಿಲ್ಲ ಎಂದು ಅರ್ಜಿದಾರರ ಪರ ವಾದಿಸಲಾಯಿತು. ಈ ಮಧ್ಯೆ ಎನ್.ಮಹಂತಣ್ಣರವರು 12-05-2026ರಂದು ಸದಸ್ಯತ್ವದಿಂದ ಅನರ್ಹಗೊಂಡಿರುವ ಹಿನ್ನಲೆಯಲ್ಲಿ ಪ್ರತಿಕಾರದ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ ಎಂಬ ವಾದವು ನ್ಯಾಯಾಲಯದ ಮುಂದೆ ಮಂಡಿಸಲಾಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಲಾಗಿದೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ