LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಕೊಲೆ ಪ್ರಕರಣದ ಆರೋಪಿ ಬಂಧನ

ಬಳ್ಳಾರಿ: ನಗರದ ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನ.17ರಂದು ರಾತ್ರಿ  ನಗರದ ಬುಡಾ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಕೊಲೆ ನಡೆದಿದ್ದು, ಮರುದಿನ ಬೆಳಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಕೊನೆಗೆ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ಇಂದು ಬೆಳಗ್ಗೆ ಸ್ಥಳ ಮಹಜರು ಮಾಡಿದ್ದು, ಘಟನೆಯ ವಿವರವನ್ನು ಪಡೆದಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ.

ಇನ್ನೂ ಕೊಲೆ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಶೇಖರಿಸಿ, ಸ್ಥಳೀಯರ ಹೇಳಿಕೆಗಳು ಹಾಗೂ ಕೊಲೆ ಆರೋಪಿಯ ಬಂಧನದ ಬಳಿಕ ತಪ್ಪೊಪ್ಪಿಗೆ ಹಾಗೂ ಫೋರೆನ್ಸಿಕ್ ವರದಿಯ ಆಧಾರದ ಮೇಲೆ  ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ವಿವರ: ಆಂದ್ರಾಳ್ ಮೂಲದ ಶಿವು ( ಮೃತ ವ್ಯಕ್ತಿ) ಹಾಗೂ ರಾಂಪೂರ ಮೂಲದ ಕೊಲೆ ಆರೋಪಿ  ಇಬ್ಬರೂ ಸ್ನೇಹಿತರಾಗಿದ್ದು, ಇಬ್ಬರೂ ಸೇರಿ ಬುಡಾ ಕಾಂಪ್ಲೆಕ್ಸ್‌ನ ನಾಲ್ಕನೇ ಮಹಡಿಯಲ್ಲಿ ಕಳ್ಳತನ ನಡೆಸಿ, ಕದ್ದ ಹಣ ಹಂಚಿಕೆಯಲ್ಲಿ ತಾರತಮ್ಯವಾದ ಹಿನ್ನೆಲೆಯಲ್ಲಿ ಇಬ್ಬರಲ್ಲೂ ತಕರಾರು ತೀವ್ರಗೊಂಡು ಮಾತಿ ಚಕಮಕಿ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ಆರೋಪಿಯು ಬಿಯರ್ ಬಾಟಲಿಯಿಂದ ಸ್ನೇಹಿತನ ತಲೆಗೆ ಹೊಡೆದಿದ್ದಾನೆ. ಬಳಿಕ ಕಟ್ಟಡದ ಮೇಲ್ಮಹಡಿಯಿಂದ ಕೆಳಗೆ ದಬ್ಬಿದ್ದಾನೆ ಎಂದು ತಿಳಿದುಬಂದಿದೆ.

 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ