LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆಗಳಿಗೆ ಕ್ರಮ: ಎನ್.ಎ. ಹ್ಯಾರಿಸ್

ಬೆಂಗಳೂರು :  ವಸತಿ ಸಂಕಿರಣಗಳಿಗೆ ಸಂಬಂಧಿಸಿದ  ಕಾನೂನು ಸುಧಾರಣೆಗಳಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಡಿಎ ಅಧ್ಯಕ್ಷ ಎನ್.. ಹ್ಯಾರೀಸ್ ಹೇಳಿದ್ದಾರೆ.

ಹಿರಿಯ ವಕೀಲರಾದ ಬೀನಾ ಪಿಳ್ಳೈ ನೇತೃತ್ವದ ನೆಕ್ಸ್ಟ್ ಲೀಗಲ್ ಸರ್ವೀಸಸ್ ಹಾಗೂ ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಷನ್ ಸಹಯೋಗದಲ್ಲಿ ಸೇಂಟ್ ಜೋಸೆಫ್ ಕಾನೂನು ಕಾಲೇಜಿನಲ್ಲಿ ವಸತಿ ಸಂಕಿರ್ಣಗಳಿಗೆ ಸಂಬಂಧಿಸಿದ ಕಾನೂನು ಜಾಗೃತಿ ಮತ್ತು ಪಾಲುದಾರರ ಸಂವಾದಪ್ರೊಪ್ರೈಟಾಸ್ 2.0’ ನಲ್ಲಿ ಮಾತನಾಡಿದ ಅವರು, ಅಪಾರ್ಟ್ಮೆಂಟ್ ಮಾಲೀಕರು, ಬಿಲ್ಡರ್ಗಳು ಮತ್ತು ವಿವಿಧ ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯತೆ ತರುವ ಉದ್ದೇಶದಿಂದ ಸರ್ಕಾರ ಹಲವು ಕಾನೂನು ಸುಧಾರಣೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಬೆಂಗಳೂರು ವಿವಿಧ ಹಿನ್ನೆಲೆಯ ಜನ ವಾಸಿಸುವ  ಚೈತನ್ಯಮಯ ಮಹಾನಗರವಾಗಿದೆ. ಜೀವನಶೈಲಿ ಹಾಗೂ ನಗರ ಜೀವನದ ಮಾದರಿಗಳು ಬದಲಾಗಿರುವ ಹಿನ್ನೆಲೆಯಲ್ಲಿ ಹಳೆಯ ಕಾನೂನುಗಳು ಮತ್ತು ಪದ್ಧತಿಗಳು ಹಲವು ಬಾರಿ ಅಡಚಣೆಯಾಗುತ್ತಿವೆ. ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಹೊಸ ಕಾನೂನು ಚೌಕಟ್ಟುಗಳು, ತಂತ್ರಜ್ಞಾನ ಆಧಾರಿತ ಆಡಳಿತ ವ್ಯವಸ್ಥೆ ಹಾಗೂ ಸಾರ್ವಜನಿಕ ಜಾಗೃತಿಯ ಮೂಲಕ ವ್ಯವಸ್ಥೆಯನ್ನು ಆಧುನೀಕರಿಸಲು ಕ್ರಮ ಕೈಗೊಳ್ಳುತ್ತಿದೆ,” ಎಂದು ಅವರು ಹೇಳಿದರು.

news_1781114721_1_879.webp

 

ಬಿಡಿಎ ಆಡಳಿತದಲ್ಲಿ ಪಾರದರ್ಶಕತೆ, ತಂತ್ರಜ್ಞಾನ ಆಧಾರಿತ ಕಾರ್ಯವಿಧಾನಗಳನ್ನು ಅಳವಡಿಸಲಾಗಿದೆ. ವಿಶೇಷ ದೂರು ಪರಿಹಾರ ವ್ಯವಸ್ಥೆ ಹಾಗೂ ಕಾನೂನು ವಿವಾದಗಳನ್ನು ಶೀಘ್ರ ಬಗೆಹರಿಸಲು ಅಧಿಕೃತ ಮಧ್ಯಸ್ಥಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. “ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಅವುಗಳನ್ನು ಶೀಘ್ರವಾಗಿ ಪರಿಹರಿಸಲು ನಿಯಮಿತ ಆನ್ಲೈನ್ ನೇರ ಸಂವಾದ ಕಾರ್ಯಕ್ರಮಗಳನ್ನು ಆರಂಭಿಸಿದ್ದೇವೆ,” ಎಂದು ಅವರು ಹೇಳಿದರು.

ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಷನ್ ಅಧ್ಯಕ್ಷ ಸತೀಶ್ ಬಿ. ಮಲ್ಯ ಮಾತನಾಡಿ, ಕಟ್ಟಡ ನಿರ್ಮಾಣ ಪ್ರಕ್ರಿಯೆ ಮತ್ತು ಅಪಾರ್ಟ್ಮೆಂಟ್ ಆಡಳಿತಕ್ಕೆ ಸಂಬಂಧಿಸಿದ ಹೊಸ ಕಾನೂನುಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ನಮ್ಮೊಂದಿಗೆ ಸುಧಾರಣೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ನಮ್ಮ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್, ರೇರಾ ಅಧಿಕಾರಿಗಳು, ಕಾನೂನು ತಜ್ಞರು, ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳು, ವಕೀಲರು, ಬಿಲ್ಡರ್ಗಳು ಹಾಗೂ ಇತರೆ ಕೈಗಾರಿಕಾ ವಲಯದ ಪ್ರಮುಖರು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ