ದಾವಣಗೆರೆ : ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಐವಿ ಸೋಂಕಿಗೆ ಬಲಿಯಾಗುತ್ತಿರುವುದು ನಿಜಕ್ಕೂ ಕಳವಳಕಾರಿಯಾದ ಸಂಗತಿಯಾಗಿದೆ. ಪ್ರಪಂಚದಲ್ಲಿಯೇ ಅತಿ ಹೆಚ್ಚು ಹೆಚ್ಐವಿ ಪೀಡಿತ ದೇಶ ದಕ್ಷಿಣ ಆಫ್ರಿಕಾ ಆಗಿದ್ದು. ಎರಡನೇ ಸ್ಥಾನವನ್ನು ಮೊಜಾಂಬಿಕ, ತೃತಿಯ ಸ್ಥಾನವನ್ನು ಭಾರತ ಪಡೆದಿದೆ. 2020ರ ಅಂಕಿ ಸಂಖ್ಯೆಗಳ ಪ್ರಕಾರ ಕರ್ನಾಟಕ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 14,000 ಕಿಂತಲೂ ಹೆಚ್ಚಿನ ಜನರು ಹೆಚ್ ಐ ವಿ ಪೀಡಿತರಾಗಿದ್ದಾರೆ ಎಂದು ಕಳವಳವನ್ನು ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ದಾವಣಗೆರೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆಯ ಎನ್ಎಸ್ಎಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಲಾಯಿತು.
ಹತ್ತು ಸಮಾಲೋಚಕರಾದ ನೇತ್ರಾವತಿ ರವರು ಮಾತನಾಡಿ, ರೆಡ್ ರಿಬ್ಬನ್ ಕ್ಲಬ್ ನ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜೀವ ಉಳಿಸುವ ಕಾರ್ಯವನ್ನು ಮಾಡಬೇಕೆಂದು ಹೇಳಿದರು. ಈ ಕ್ಲಬ್ ನ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ರೆಡ್ ರಿಬ್ಬನ್ ಕ್ಲಬ್ ನ ಸಂಚಾಲಕರಾದ ಲೋಕೇಶ್ ನಾಯಕ್ ರವರು ಸ್ವಾಗತಿಸಿದರು ಮತ್ತು ಮಂಜುನಾಥ್ ರವರು ವಂದಿಸಿದರು. ಡಾ. ಮದನಸ್ವಾಮಿ ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಸವರಾಜ್ ತಹಸೀಲ್ದಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಜರಿದ್ದರು.