LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ನ್ಯಾಯಾಲಯದ ಆದೇಶದಂತೆ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು

ಬೆಂಗಳೂರು : ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟೂಡಿಯೋದಿಂದ ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್ ವಿ. ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಜನವರಿ 13 ರಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕ ಸದಸ್ಯ ಪೀಠ ಸಮಾಧಿ ಸ್ಥಳವನ್ನು ತೆರುವುಗೊಳಿಸುವಂತೆ ಆದೇಶ ನೀಡಿತ್ತು. ಆದ್ಯತೆಯ ಮೇರೆಗೆ ಸಮಾಧಿ ತೆರವುಗೊಳಿಸುವಂತೆ ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ನಗರದ ವಿಶೇಷ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು ಎಂದಿದ್ದಾರೆ.



ಬಾಲಕೃಷ್ಣ ಅವರ ಮೊಮ್ಮಗ ಬಿ.ಎಸ್. ಕಾರ್ತಿಕ್ ಕಾನೂನು ಹೋರಾಟ  ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಎರಡು ತಿಂಗಳ ನಂತರವೂ ಸಮಾಧಿ ಸ್ಥಳವನ್ನು ತೆರವುಗೊಳಿಸಿರಲಿಲ್ಲ. ಆದರೆ ಕಳೆದ 2020 ರ ಜನವರಿ 10 ರಂದು ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ 2.5 ಎಕರೆ ಭೂಮಿಯನ್ನು ಸಹ ಸರ್ಕಾರ ಮಂಜೂರು ಮಾಡಿತ್ತು ಎಂದು ಅವರು ಹೇಳಿದ್ದಾರೆ.

ಆದೇಶ ನೀಡಿದ ಎರಡು ತಿಂಗಳಲ್ಲಿ ಸಮಾಧಿ ಸ್ಥಳವನ್ನು ತೆರವು ಮಾಡದ ಕಾರಣ ನ್ಯಾಯಾಲಯದ ಆದೇಶದಂತೆ ಪೊಲೀಸರ ಸಮ್ಮುಖದಲ್ಲಿ ಸಮಾಧಿ ಸ್ಥಳವನ್ನು ತೆರವು ಮಾಡಲಾಗಿದೆ ಎಂದು ವಕೀಲರಾದ ಕಾರ್ತಿಕ್ ವಿ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ