LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ವಿಶ್ವ ತೊನ್ನು ರೋಗ ದಿನಾಚರಣೆ ಅಂಗವಾಗಿ ಇಎಸ್ಐ ಆಸ್ಪತ್ರೆಯಲ್ಲಿ ಜಾಗೃತಿ ಕಾರ್ಯಕ್ರಮ

ಬೆಂಗಳೂರು : ವಿಶ್ವ ತೊನ್ನು ರೋಗ ದಿನಾಚರಣೆಯ ಅಂಗವಾಗಿ ರಾಜಾಜಿನಗರದ ಇಎಸ್ ಮಾದರಿ ಆಸ್ಪತ್ರೆಯ ಚರ್ಮರೋಗ ವಿಭಾಗದಿಂದ ತೊನ್ನು ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತೊನ್ನು ರೋಗದ ಕಾರಣಗಳು, ಲಕ್ಷಣಗಳು, ಚಿಕಿತ್ಸೆ ಹಾಗೂ ರೋಗದ ಬಗ್ಗೆ ಸಮಾಜದಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವ ಕುರಿತು ಮಾಹಿತಿ ನೀಡಲಾಯಿತು. ತೊನ್ನು ಸಾಂಕ್ರಾಮಿಕವಲ್ಲ ಹಾಗೂ ಇದು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನಕ್ಕೆ ಅಡ್ಡಿಯಾಗಬಾರದು ಎಂಬ ಸಂದೇಶವನ್ನು ವೈದ್ಯರು ನೀಡಿದರು.

news_1782387204_2_432.webp

 

ಚರ್ಮರೋಗ ತಜ್ಞ  ಡಾ.ಎಮ್.ಎಸ್. ಗಿರೀಶ್ ಮಾತನಾಡಿ, ತೊನ್ನು ರೋಗದಿಂದ ಬಳಲುವವರನ್ನು ಸಮಾಜವು ಸಮಾನವಾಗಿ ಕಾಣಬೇಕು. ರೋಗಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದು ಮತ್ತು ಸಮಯಕ್ಕೆ ಸರಿಯಾಗಿ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.

ಡಾ. ರಘುನಾಥ್ ಮಾತನಾಡಿ ತೊನ್ನು ವಂಶ ಪರಂಪರೆಯಾಗಿ ಹರಡುವುದಿಲ್ಲ, ಈಗ ಇದಕ್ಕೆ ಉತ್ತಮ ಚಿಕಿತ್ಸವಿದಾನಗಳು ಲಭ್ಯವಿದೆ. ಬಗ್ಗೆ ಇರುವ ಕೀಳರಿಮೆಯನ್ನು ಸಮಾಜದಿಂದ ತೆಗೆದು ಹಾಕೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯರು, ಆಸ್ಪತ್ರೆಯ ಸಿಬ್ಬಂದಿ, ತೊನ್ನು ರೋಗದಿಂದ ಬಳಲುತ್ತಿರುವವರು ಹಾಗೂ ಅವರ ಕುಟುಂಬ ಸದಸ್ಯರು, ಡಾ. ವಿಜಯ ಲಕ್ಷ್ಮಿ, ಡಾ. ಶ್ರೀಕಾಂತ್, ಡಾ. ಯಶವಂತ್, ಗೋಪಾಲಕೃಷ್ಣ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ