LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಾಲ್ಮೀಕಿ ಭವನದಲ್ಲಿ ನಡೆದ ಬಾಲ ಮೇಳ ಕಾರ್ಯಕ್ರಮ

ಮರಿಯಮ್ಮನಹಳ್ಳಿ: ಮಕ್ಕಳ ಶಾಲಾ ಪೂರ್ವ ಶಿಕ್ಷಣದ ಬಗ್ಗೆ ಸಮುದಾಯದಲ್ಲಿ ಅರಿವು ಮೂಡಿಸಲು ಬಾಲ ಮೇಳ ಸಹಕಾರಿ ಎಂದು ಪ.ಪಂ. ಉಪಾಧ್ಯಕ್ಷೆ ರೋಗಣ್ಣ ನವರ ಲಕ್ಷ್ಮೀ ಮಂಜುನಾಥ ಹೇಳಿದರು.

ಅವರು ಪಟ್ಟಣದ 9ನೇ ವಾರ್ಡ್ ನ ವಾಲ್ಮೀಕಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ವಿಜಯನಗರ,  ಶಿಶು ಅಭಿವೃದ್ಧಿ ಯೋಚನಾಧಿಕಾರಿಗಳ ಕಾರ್ಯಾಲಯ ಹೊಸಪೇಟೆ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಾಲ ಮೇಳ ಕಾರ್ಯಕ್ರಮವನ್ನು  ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.‌

ಶಾಲಾ ಪೂರ್ವ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಚಟುವಟಿಕೆಗಳು ನೆರೆದಿದ್ದ ಪಾಲಕ ಪೋಷಕರ ಗಮನ ಸೆಳೆದವು.‌

ಈ ಸಂದರ್ಭದಲ್ಲಿ ಎಸಿಡಿಪಿಒ ವನಮಾಲ, ಮೇಲ್ವಿಚಾರಕರಾದ ಅಂಬುಜಾ, ರೇಣುಕ ಎಲ್ಲಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಉಮಾದೇವಿ, ಪ್ರಮೀಳಾ, ಮಂಜುಳಾ, ನೀಲಮ್ಮ, ಸಿ ಆರ್.ಪಿ. ಕರಿಬಸಪ್ಪ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ