LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ತೈಲ ಬೆಲೆ ಏರಿಕೆ ಬೆನ್ನಲ್ಲೇ ಕಂಪ್ಲಿಯಲ್ಲಿ ಪೆಟ್ರೋಲ್ ಬಂಕ್ಗಳ ಬಂದ್

ಬಳ್ಳಾರಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ನಡುವೆಯೇ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಪೆಟ್ರೋಲ್ ಬಂಕ್‌ಗಳು ಅಚಾನಕ್ ಬಂದ್ ಆಗಿರುವುದು ಸಾರ್ವಜನಿಕರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

 

ಕಂಪ್ಲಿ ನಗರದ ಬಳ್ಳಾರಿ ರಸ್ತೆಯಲ್ಲಿರುವ ಕೆಲವು ಪ್ರಮುಖ ಪೆಟ್ರೋಲ್ ಬಂಕ್‌ಗಳು ದಿನಪೂರ್ತಿ ಕಾರ್ಯನಿರ್ವಹಿಸದೇ ಬಂದ್ ಆಗಿದ್ದರಿಂದ ವಾಹನ ಸವಾರರು ಇಂಧನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಭಾರತ್ ಪೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಸಂಸ್ಥೆಗಳ ಬಂಕ್‌ಗಳು ಬಂದ್ ಆಗಿರುವುದು ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

 

ಇನ್ನೂ ತಾಲೂಕಿನ ಗುತ್ತಿಗನೂರು ಸಮೀಪದಲ್ಲಿರುವ ಪೆಟ್ರೋಲ್ ಬಂಕ್ ಸಹ ಕಾರ್ಯನಿರ್ವಹಿಸದೇ ಬಂದ್ ಆಗಿದ್ದರಿಂದ ಗ್ರಾಮೀಣ ಭಾಗದ ಜನರು ಕೂಡ ಸಂಕಷ್ಟ ಅನುಭವಿಸಿದರು. ಕೆಲಸದ ನಿಮಿತ್ತ ದೂರ ಪ್ರಯಾಣಕ್ಕೆ ಹೊರಟಿದ್ದ ವಾಹನ ಸವಾರರು ಬಂಕ್‌ಗಳಿಂದ ಖಾಲಿಹಸ್ತವಾಗಿ ಹಿಂದಿರುಗಬೇಕಾದ ಪರಿಸ್ಥಿತಿ ಎದುರಾಯಿತು. ಕೆಲವರು ಹಲವು ಕಿಲೋಮೀಟರ್ ದೂರದ ಬಂಕ್‌ಗಳಿಗೆ ತೆರಳಿ ಇಂಧನ ಪಡೆಯಬೇಕಾಯಿತು.

 

ಸ್ಥಳೀಯರ ಆರೋಪದ ಪ್ರಕಾರ, ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಂಗ್ರಹ ಇದ್ದರೂ ಸಹ ಸಾರ್ವಜನಿಕರಿಗೆ ವಿತರಣೆ ಮಾಡಲು ಮಾಲೀಕರು ಮುಂದಾಗಿಲ್ಲ ಎನ್ನಲಾಗಿದೆ. ತೈಲ ಬೆಲೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಲ್ಲಿ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ ಕೆಲವರು ಉದ್ದೇಶಪೂರ್ವಕವಾಗಿ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

 

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ತೈಲ ದರ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಬದುಕಿನ ಮೇಲೆ ಅದರ ಪರಿಣಾಮ ಸ್ಪಷ್ಟವಾಗಿ ಕಾಣಿಸುತ್ತಿದೆ. ಸಾರಿಗೆ ವೆಚ್ಚ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಹೆಚ್ಚುವರಿ ಹೊರೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿವೆ. ಇಂತಹ ಸಂದರ್ಭದಲ್ಲೇ ಪೆಟ್ರೋಲ್ ಬಂಕ್‌ಗಳು ಬಂದ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

ಬಂಕ್‌ನಲ್ಲಿ ಇಂಧನ ಇದ್ದರೂ ಕೊಡುತ್ತಿಲ್ಲ. ಇದು ಸಾರ್ವಜನಿಕರೊಂದಿಗೆ ನಡೆಯುತ್ತಿರುವ ಅನ್ಯಾಯ. ಜಿಲ್ಲಾಡಳಿತ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಕ್ಷಣ ಕ್ರಮ ಕೈಗೊಂಡು ಬಂಕ್‌ಗಳ ಪರಿಶೀಲನೆ ನಡೆಸಬೇಕು ಎಂದು ವಾಹನ ಸವಾರರು ಒತ್ತಾಯಿಸಿದ್ದಾರೆ.

 

ಅತ್ಯಾವಶ್ಯಕ ಸೇವೆಗಳಿಗೆ ತೆರಳುವ ಜನರು, ಆಟೋ ಚಾಲಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳು ಇಂಧನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಕಡೆಗಳಲ್ಲಿ ವಾಹನಗಳ ಉದ್ದ ಸಾಲುಗಳು ಕಂಡುಬಂದರೆ, ಇನ್ನೂ ಕೆಲವು ಬಂಕ್‌ಗಳಲ್ಲಿ “ಇಂಧನ ಇಲ್ಲ ಎಂಬ ಫಲಕ ಅಳವಡಿಸಲಾಗಿತ್ತು.

 

ಈ ಕುರಿತು ಜಿಲ್ಲಾಡಳಿತ ತಕ್ಷಣ ಗಮನಹರಿಸಿ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ನಿರಂತರವಾಗಿ ಇಂಧನ ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ