LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬಾವಿ ಆಂಜನೇಯಸ್ವಾಮಿ ಮಹಾರಥೋತ್ಸವ

ಕುರುಗೋಡು :  ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಶ್ರೀರಾಮನವಮಿ ಸಂಜೆ ಬಾವಿ ಆಂಜನೇಯಸ್ವಾಮಿ ಮಹಾರಥೋತ್ಸವ  ವಿಜೃಂಭಣೆಯಿಂದ ನೆರವೇರಿತು.

ತೀವ್ರ ಬಿಸಿಲಿನ ಬೇಗೆಯನ್ನು ಲೆಕ್ಕಿಸದೆ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.

ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಬೆಳಿಗ್ಗೆ ಹೋಮ, ಹವನ, ವಿಶೇಷ ಪೂಜೆ ಧಾರ್ಮಿಕ ವಿಧಿಧಿವಿಧಾನಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು.



ಇಟಗಿ ಹಿರೇಮಠ ಸಂಸ್ಥಾನದ ಗುರುಶಾಂತವೀರ, ಕಲ್ಲುಕಂಭ ರುದ್ರಮುನಿ ತಾತ ಮತ್ತು ಕರಿಬಸವ ಶರಣರು ಪೂಜೆಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.ಇದ್ದರು.

ಸಂಜೆ ಅಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಪಾದಗಟೆ ವರೆಗೆ ಎಳೆದು ನಂತ ಸ್ವಸ್ಥಳಕ್ಕೆ ಭಕ್ತರು ಎಳೆದುತಂದರು. ರಥ ಎಳೆಯುವ ಸಂದರ್ಭದಲ್ಲಿ ಭಕ್ತರು ಆಂಜನೇಯಸ್ವಾಮಿಗೆ ಜಯಕಾರ ಕೂಗಿದರು.

ಬಾದನಹಟ್ಟಿ ಸೇರಿದಂತೆ ಸಿದ್ದಮ್ಮನಹಳ್ಳಿ, ಯರಿಂಗಳಿಗಿ, ಕುರುಗೋಡು, ಯಲ್ಲಾಪುರ, ವದ್ದಟ್ಟಿ ಗ್ರಾಮಗಳ ಜನರು ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದರು. ರಥಕ್ಕೆ ಹೂ ಹಣ್ಣು ಎಸೆದು ಭಕ್ತಿ ಮೆರೆದರು.

ರಥೋತ್ವದ ಅಂಗವಾಗಿ ಕಳೆದ ಒಂಭತ್ತು ದಿನಗಳ ಕಾಲ ಜರುಗಿದ ಸಪ್ತಭಜನೆ ಶುಕ್ರವಾರ ಕೊನೆಗೊಂಡಿತು.

ಪೋಲಿಸ್ ಸಿಬ್ಬಂದಿಯನ್ನು ನಿರೋಜಿಸಿ ಅಹಿತಕರ ಘಟನೆ ನಡೆಯದಂತೆ ಬಂದಾಬಸ್ತ್ ಮಾಡಿದ್ದರು,

ರಥೋತ್ವದ ಅಂಗವಾಗಿ ಕಳೆದ ಒಂಭತ್ತು ದಿನಗಳ ಕಾಲ ಜರುಗಿದ ಸಪ್ತಭಜನೆ ಭಾನುವಾರ ಕೊನೆಗೊಂಡಿತು. ರಾತ್ರಿ, ಬಯಲು ನಾಟಕ ಪ್ರದರ್ಶನಗೊಂಡವು..

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ