LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗದಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ; ಜನಜಾಗೃತಿಗಾಗಿ ಬೈಕ್ ಜಾಥ

ಬಳ್ಳಾರಿ :  ಪ್ರತಿನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನಜಾಗೃತಿ ಮೂಡಿಸಲು ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೈಕ್ ಜಾಥಾ ಗೆ ಚಾಲನೆ ನೀಡಿ ಅವರು ಮಾತನಾಡಿದರು.



ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಒಳ್ಳೆಯ ಜೀವನಶೈಲಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬಿಡುವಿನ ಸಮಯದಲ್ಲಿ ಯೋಗಾಭ್ಯಾಸ ಮಾಡಬೇಕು. ಈ ವರ್ಷದ ಘೋಷವಾಕ್ಯವು ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬುದಾಗಿದೆ ಎಂದು ತಿಳಿಸಿದರು.

ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡು ಎಸ್‌ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತದಿಂದ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊAಡಿತು.

            ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಯೋಗ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST