LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಚಂದರಗಿಗೆ ‘ಬಿ.ಆರ್. ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಬಿ.ಆರ್. ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿ ಬೆಂಗಳೂರಿನ

ವರದಿಗಾರ ವಿಜಯಕುಮಾರ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡುವರು.  ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನಲ್ಲಿ ಸಮಾರಂಭ  ನಡೆಯಲಿದೆ.



ವಿಜಯಕುಮಾರ ಚಂದರಗಿ ಮೂಲತಃ ಧಾರವಾಡ ಜಿಲ್ಲೆಯವರು. ಉತ್ಸಾಹಿ ಪತ್ರಕರ್ತ. ಶಿವಮೊಗ್ಗ ಸೇರಿ ಕೆಲವು ಕಡೆ ಕೆಲಸ ಮಾಡಿ ಈಗ ಬೆಂಗಳೂರಿನಲ್ಲಿ ಉದಯವಾಣಿ ವರದಿಗಾರರಾಗಿ ಉತ್ತಮ  ವರದಿಗಳನ್ನು ಬರೆದು ಗಮನ ಸೆಳೆದಿದ್ದಾರೆ.

ರೋಹಿತ್ ಮೂಲತಃ ತುಮಕೂರು ಜಿಲ್ಲೆ ಗ್ರಾಮೀಣ ಪ್ರದೇಶದಿಂದ ಬಂದ ಅತ್ಯಂತ ಪ್ರತಿಭಾವಂತ ಯುವ ಪತ್ರಕರ್ತ. ಚಿಕ್ಕವಯಸ್ಸಿನಲ್ಲೇ ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಕೆಲವು ಆಂಗ್ಲ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ದುರ್ದೈವದಿಂದ ಅವರ ತೋಟದ ಬಾವಿಯಲ್ಲಿ ಈಜಲು ಹೋಗಿ ಅಕಾಲ ಮರಣಕ್ಕೆ ತುತ್ತಾದರು. ಅವರ ತಂದೆ ರಾಜಣ್ಣ ಮತ್ತು ತಾಯಿ  ಲಲಿತಾ ಅವರು ತಮ್ಮ ಮಗನ  ಹೆಸರಿನಲ್ಲಿ ಬಿ.ಆರ್. ರೋಹಿತ್ ಪತ್ರಿಕೋದ್ಯಮ  ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ ಎಂದು ಮೀಡಿಯಾ ಸ್ಟಡೀಸ್ ಅಂಡ್ ಅಂಡ್ ರೀಸರ್ಚ್ ಸಂಸ್ಥೆಯ ಎಚ್.ಆರ್.ಶ್ರೀಶಾ ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ