LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಬಿಎಂ ಕಾವಲ್ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ: ಕಾವಲುಗಾರ ಗವಿರಾಜ್ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಬಿಎಂ ಕಾವಲ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ರಾತ್ರಿ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತಿರುವ ಗವಿರಾಜ್ ಎಂಬುವರ ಕಾರ್ಯವೈಖರಿ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಮತ್ತು ಜಂಟಿ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

 

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ನೀಡಿರುವ ದೂರಿನಲ್ಲಿ ತಿಳಿಸಿರುವ ಪ್ರಮುಖ ಆರೋಪಗಳು ಹೀಗಿವೆ.

 

ಕರ್ತವ್ಯ ಲೋಪ: ಕರ್ತವ್ಯದ ಅವಧಿಯಲ್ಲಿ ತಮಗೆ ವಹಿಸಲಾದ ಕಾವಲು ಕೆಲಸವನ್ನು ಸರಿಯಾಗಿ ನಿರ್ವಹಿಸದೆ, ಬೇರೆ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

 ಆಡಳಿತದಲ್ಲಿ ಹಸ್ತಕ್ಷೇಪ: ನಿಲಯದ ದಿನನಿತ್ಯದ ಆಡಳಿತ, ತರಕಾರಿ ಖರೀದಿ, ಅಡುಗೆ ವಿಚಾರ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸಿ, ನಿಲಯಪಾಲಕರು ಮತ್ತು ಸಿಬ್ಬಂದಿ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬೆದರಿಕೆ ಮತ್ತು ದೂರುಗಳ ಹುನ್ನಾರ: ತಮ್ಮ ಮಾತನ್ನು ಕೇಳದ ನಿಲಯಪಾಲಕರು ಮತ್ತು ಅಡುಗೆ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಸುಳ್ಳು ದೂರುಗಳನ್ನು ಕೊಡಿಸಿ ವರ್ಗಾವಣೆ ಮಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

news_1790906925_4_882.webp

 

ಸುರಕ್ಷತೆಗೆ ಆತಂಕ: ನಿಲಯದ ಆವರಣಕ್ಕೆ ಪ್ರತಿನಿತ್ಯ ಹೊರಗಿನ ಅಪರಿಚಿತ ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ಕರೆತರುತ್ತಿದ್ದು, ಇದರಿಂದ ರಾತ್ರಿ ವೇಳೆ ಬಡ ದಲಿತ ವಿದ್ಯಾರ್ಥಿಗಳಿಗೆ ಜೀವಭಯ ಮತ್ತು ಸುರಕ್ಷತಾ ಆತಂಕ ಎದುರಾಗಿದೆ.

ಪ್ರಭಾವ ಬಳಕೆ: ತಮ್ಮ ವಿರುದ್ಧ ಕ್ರಮ ಕೈಗೊಳ್ಳದಂತೆ ತಡೆಯಲು ಮತ್ತು ತಮ್ಮ ಪ್ರಭಾವ ಬೆಳೆಸಿಕೊಳ್ಳಲು ಕೆಲವು ದಲಿತ ಮುಖಂಡರು ಮತ್ತು ಗುತ್ತಿಗೆದಾರರ ಹೆಸರನ್ನು ಹೇಳಿಕೊಂಡು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಮೇಲೆ ಪರೋಕ್ಷ ಒತ್ತಡ ಹೇರುತ್ತಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

ಪರಿಶೀಲನೆಗೆ ಆಗ್ರಹ: ದೂರುದಾರರ ಪ್ರಕಾರ, ಈ ವ್ಯಕ್ತಿಯ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿದ್ದು, ಅವರ ಪೊಲೀಸ್ ಹಿನ್ನೆಲೆಯನ್ನು ಪರಿಶೀಲಿಸಿ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

ಈ‌ ಮೇಲಿನ ಎಲ್ಲ ಕಾರಣಗಳಿಂದ ವಿದ್ಯಾರ್ಥಿ ನಿಲಯದ ಶಿಸ್ತು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೇವಾ ದಾಖಲೆಗಳನ್ನು ಪರಿಶೀಲಿಸಿ, ಪ್ರಾಮಾಣಿಕ ಮತ್ತು ವಿದ್ಯಾರ್ಥಿ ಸ್ನೇಹಿ ಕಾವಲುಗಾರನನ್ನು ನೇಮಿಸಬೇಕು ಎಂದು ನೊಂದ ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. 7 ದಿನದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ