LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ದೇಶದಲ್ಲೇ ಮಾದರಿ ಬ್ಯಾಂಕ್

ಬೆಂಗಳೂರು :  ʼಸಹಕಾರಿ ಬ್ಯಾಂಕುಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸುತ್ತಾ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿʼ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಮಾಧವರೆಡ್ಡಿ ಪ್ರಶಂಸೆ ವ್ಯಕ್ತಪಡಿಸಿದರು.

ಕೋರಮಂಗಲದಲ್ಲಿ ನಡೆದ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನ ರಜತ ಮಹೋತ್ಸವವನ್ನು ಉದ್ಘಾಟಿಸಿ, ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತನಾಡಿದ ಅವರು, ʼಚಾರ್ಟರ್ಡ್ ಬ್ಯಾಂಕ್ 2022ನೇ ಸಾಲಿನ ದೇಶದ ಅತ್ಯುತ್ತಮ ಬ್ಯಾಂಕ್ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಜತೆಗೆ ಶೂನ್ಯ ಎನ್ ಪಿಎ ಹೊಂದಿದ ಸಾಧನೆ ಮಾಡುವುದು ಸುಲಭದ ಮಾತಲ್ಲ. ಇಂಥದ್ದೊಂದು ಸಾಧನೆಗೈದ ಸಹಕಾರಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆʼ ಎಂದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷ ಎಂ.ಮುನಿರೆಡ್ಡಿ ʼಕೇವಲ 1.29 ಕೋಟಿ ರೂಪಾಯಿ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ 445 ಕೋಟಿ ರೂಪಾಯಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಬ್ಯಾಂಕಿನ ಗ್ರಾಹಕರೇ ಈ ಸಾಧನೆಯ ಹಿಂದಿನ ಕಾರಣಕರ್ತರುʼ ಎಂದರು.

ಉಪಾಧ್ಯಕ್ಷ ನಾರಾಯಣ ಎಸ್ ಭಟ್, ಸಂಸ್ಥಾಪಕ ಅಧ್ಯಕ್ಷ ಎಂ.ನಾಗರಾಜ್, ವಿಜಯರಾಘವರೆಡ್ಡಿ, ಬ್ಯಾಂಕಿನ ಸಿಇಓ ಕೆ.ಬಿ.ಶಿವಣ್ಣ, ಆಡಳಿತ ಮಂಡಳಿ ಸದಸ್ಯರಾದ ,ಮುನಿವೆಂಕಟಪ್ಪ, ವೆಂಕಟೇಶ್ ಅಯ್ಯರ್ ಇದ್ದರು. ರಜತ ಮಹೋತ್ಸವದ ನೆನಪಿಗಾಗಿ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ