LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಬಾಲ ವೈಜ್ಞಾನಿಕ ಪ್ರದರ್ಶಿನಿ ಕಾರ್ಯಕ್ರಮ : ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ

ನಾಯಕನಹಟ್ಟಿ: ರಾಜ್ಯ ಸಂಶೋಧನಾ ಮತ್ತು ತರಬೇತಿ ಇಲಾಖೆ ಬೆಂಗಳೂರು ವತಿಯಿಂದ ಆನಲೈನ್ ವಿಧಾನದ ಮೂಲಕ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಸ್ತರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿ  ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ  ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ  ವಿದ್ಯಾರ್ಥಿನಿ ಎನ್ ಪಲ್ಲವಿ ಪ್ರಥಮ ಸ್ಥಾನ ಪಡೆದು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.



ತ್ಯಾಜ್ಯ ನಿರ್ವಹಣೆ ಎಂಬ ವಿಷಯದಲ್ಲಿ ಪ್ಲಾಸ್ಟಿಕ್ ಕವರ್ ಗಳಿಂದ ಜೆಲ್ಲಿ ಕಲ್ಲು ತಯಾರಿಕೆ  ಮಾದರಿಯನ್ನು  ವಿನೂತನ ವಿಧಾನದಲ್ಲಿ ತಯಾರಿಸಿ ಪ್ಲಾಸ್ಟಿಕ್  ಮರುಬಳಕೆ ಮಾಡುವ ವಿಧಾನವನ್ನು ಪ್ರಾಯೋಗಿಕವಾಗಿ ಸಾಬೀತು ಮಾಡಿ ತೋರಿಸಿದ ಮಾದರಿ ಇದಾಗಿದೆ.

ಪ್ಲಾಸ್ಟಿಕ್ ಜೆಲ್ಲಿಕಲ್ ಅನ್ನು ಸಿಮೆಂಟ್ ಕಾಂಕ್ರಿಟ್ ತಯಾರಿಕೆಯಲ್ಲಿ ಉಪಯೋಗಿಸಿ ಕಟ್ಟಡ, ರಸ್ತೆ ನಿರ್ಮಾಣದಲ್ಲಿ ಬಳಸಬಹುದಾಗಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ  ವಿಜ್ಞಾನ ಶಿಕ್ಷಕ ನಾಗಭೂಷಣ್ ಮಾರ್ಗದರ್ಶನ ಮಾಡಿದ್ದಾರೆ.



ವಿದ್ಯಾರ್ಥಿನಿಯ ಈ ಸಾಧನೆಗೆ ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಕೆ.ಎಸ್ ಸುರೇಶ್, ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್, ಎಸ್.ಡಿ. ಎಂ.ಸಿ ಅಧ್ಯಕರಾದ  ಕಾಟಯ್ಯ, ಶಾಲಾ ಸಿಬ್ಬಂದಿ ಹಾಗೂ ಊರಿನ ಗ್ರಾಮಸ್ಥರು, ಅಭಿನಂದಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ