LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಮಕ್ಕಳು ಉತ್ತಮ ಆರೋಗ್ಯ ಅಭ್ಯಾಸ ರೂಢಿಸಿಕೊಳ್ಳಿ: ಲಕ್ಷ್ಮಿದೇವಿ

ಬಳ್ಳಾರಿ :  ಆರೋಗ್ಯವಂತ ಯುವ ನಾಡನ್ನು ರೂಪಿಸಬೇಕೆಂದರೆ ಮಕ್ಕಳು ಉತ್ತಮ ಆರೋಗ್ಯದ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಾಣಾಧಿಕಾರಿ ಲಕ್ಷ್ಮಿದೇವಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಪಂ ಪೋಷಣ್ ವಿಭಾಗದಿಂದ ಕೆ.ಎಂ.ಇ.ಅರ್.ಸಿ ಇಲಾಖೆಯ CEPMIZ ಯೋಜನೆಯಡಿ ನಗರದ ಕರ್ನಾಟಕ ಪಬ್ಲಿಕ್ ಶಾಲೆ (ಬಾಲಕಿಯರ) ಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶೇಷ ಪೂರಕ ಪೌಷ್ಠಿಕ ಅಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ನತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಮತ್ತು ಎಎನ್ಎಎಫ್ ಯೋಜನೆಯ ಜೊತೆಗೆ ಶಾಲಾವಧಿಯ ನಂತರ ಮಕ್ಕಳಿಗೆ ಉಸುಲಿಕಾಳು ಹಾಗೂ ಹಣ್ಣನ್ನು ವಿತರಿಸಲಾಗುತ್ತದೆ ಎಂದರು.



ಜಿಪಂ ಪೋಷಣ್ ವಿಭಾಗದ ಶಿಕ್ಷಣಾಧಿಕಾರಿ ಡಿ.ಕಸ್ತೂರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರವು ಶಾಲಾ ಮಕ್ಕಳ ಪೋಷಕರಂತೆ ಕಾಳಜಿ ವಹಿಸುತ್ತಿದೆ. ಮಕ್ಕಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಉಸುಲಿಕಾಳಲ್ಲಿರುವ ವಿಟಮಿನ್, ಪ್ರೋಟಿನ್‌ಗಳು ಮಕ್ಕಳ ದೈಹಿಕ ಬೆಳವಣಿಗೆಯ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಉಪಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯ ಎಪಿಸಿ ಶಖೀಲ್ ಅಹ್ಮದ್, ಬಳ್ಳಾರಿ ಪಶ್ಚಿಮ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ್ ಜಿ.ಎಸ್., ಸಿರುಗುಪ್ಪ ತಾಲ್ಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಝಾಫರ್ ಷರೀಫ್, ಜಿಲ್ಲೆಯ CEPMIZ ಯೋಜನೆಯ ನಿಕಟಪೂರ್ವ ನೋಡಲ್ ಅಧಿಕಾರಿ ಬಸವರಾಜ್ ಮಿಂಚೇರಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ಬಳ್ಳಾರಿ ಪೂರ್ವ ಮತ್ತು ಪಶ್ಚಿಮ ವಲಯಗಳ ಅಕ್ಷರ ದಾಸೋಹ ಸಹಾಯಕ ಅಧಿಕಾರಿ ಶಿವನನಾಯ್ಡ್ ಸ್ವಾಗತಿಸಿದರು.

ಸಂಡೂರಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿ.ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ