LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

ಬೆಂಗಳೂರು :  ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ  ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

[caption id="attachment_24382" align="alignnone" width="2080"] Chief Minister Siddaramaiah and Deputy Chief Minister DK Shivakumar symbolically issued tickets to women passengers in Bengaluru on Monday as state government’s key guarantee scheme, Stree Shakti that allows women to travel in government buses for free, achieved a significant milestone by crossing 500-crore rides. -KPN ### Stree Shakti 500-crore rides[/caption]

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST