ವಿಧಾನಸೌಧದ ಮೊದಲ ಮಹಡಿಯಲ್ಲಿ ನೂತನವಾಗಿ ನವೀಕರಣಗೊಂಡ ಕರ್ನಾಟಕ ವಿಧಾನ ಮಂಡಲ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೂರು ದಿನ ನಡೆಯುವ ಸಮ್ಮೇಳನದ ಮೊದಲ ದಿನ ಮಧ್ಯಾಹ್ನ 3-30 ಗಂಟೆಗೆ ಲೋಕಸಭೆಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಿಪಿಎ ಕಾರ್ಯಕಾರಿ ಸಮಿತಿಯ ಸಭೆಯನ್ನು ವಿಧಾನಸೌಧದಲ್ಲಿ ಏರ್ಪಡಿಸಲಾಗಿದೆ. ಅಂದು ಸಂಜೆ 5-30ಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಲೋಕಸಭೆಯ ಸಭಾಧ್ಯಕ್ಷರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ನಂತರ ಗಣ್ಯರಿಗೆ ಔತಣ ಕೂಟ ಏರ್ಪಡಿಸಲಾಗಿದೆ.

ಸೆ.12 ಮತ್ತು 13 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸಮ್ಮೇಳನ ಮುಂದುವರಿಯಲಿದೆ. ಸೆ.14 ರಂದು ಮೈಸೂರು ಮತ್ತು ಸುತ್ತಮುತ್ತಲಿನ ಸ್ಥಳಗಳಿಗೆ ಸಮ್ಮೇಳನೋತ್ತರ ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ ಸಭಾಧ್ಯಕ್ಷರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳೂ ಭಾಗವಹಿಸುವ ಸಾಧ್ಯತೆಯೂ ಇದೆ. ರಾಜ್ಯ ಸಭೆಯ ಉಪಸಭಾಪತಿಗಳು, ವಿವಿಧ ರಾಜ್ಯಗಳ ಸಭಾಪತಿಗಳು, ಉಪ ಸಭಾಪತಿಗಳು, ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರುಗಳು, ಲೋಕಸಭೆ, ರಾಜ್ಯ ಸಭೆಯ ಮಹಾ ಕಾರ್ಯದರ್ಶಿಗಳು, ವಿವಿಧ ರಾಜ್ಯಗಳ ವಿಧಾನಸಭೆ, ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಲೋಕಸಭೆಯ ಅಧಿಕಾರಿಗಳು, ವಿವಿಧ ರಾಜ್ಯಗಳ ವಿಧಾನಸಭೆ, ವಿಧಾನ ಪರಿಷತ್ತಿನ ಇತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಯು.ಟಿ.ಖಾದರ್ ಫರೀದ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸರ್ಕಾರದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಉನ್ನತ ಹಾಗೂ ಹಿರಿಯ ಅಧಿಕಾರಿಗಳು, ಸದನದ ಕಲಾಪದ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳ ತಂಡದವರು ಮತ್ತು ವಿಧಾನಸೌಧದ ಸಿಬ್ಬಂದಿ ವರ್ಗದವರು ಇದ್ದರು.
ಧರ್ಮಸ್ಥಳ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ. ಎಸ್ ಐ ಟಿ ತನಿಖೆ ಆಗಬೇಕು. ವರದಿ ಬಂದ ಮೇಲೆ ತೀರ್ಪಿನ ವಿಚಾರ ಪ್ರಕಟಿಸಬೇಕು. ಅಲ್ಲಿಯವರೆಗೂ ಬೇಡ ಎಂದಿದ್ದೆ. ನನಗೆ ಈ ಹಿಂದೆ ದಾಳಿಕೋರರ ಭಯ ಇತ್ತು. ಈಗ ಇಲ್ಲ. ಎಲ್ಲ ಸರಿ ಹೋಗಿದೆ. ಆಡಳಿತದಲ್ಲಿ ಸುಧಾರಣೆ ತರುವುದೇ ನನ್ನ ಉದ್ದೇಶ. ನನಗೆ ಸಭಾಧ್ಯಕ್ಷ ಸ್ಥಾನ ಲಭಿಸಿದ್ದಕ್ಕೆ, ಇದನ್ನು ನಿರ್ವಹಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಎಲ್ಲರೂ ಸಹಕರಿಸಬೇಕು. ಟೀಕೆ ಮಾಡುವುದು ಸುಲಭ. ಸ್ಥಾನದಲ್ಲಿ ಕುಳಿತಾದ ಅದರ ಸಾಧಕ-ಬಾಧಕಗಳು ಗೊತ್ತಾಗುತ್ತವೆ. ಇಡೀ ದೇಶದಲ್ಲಿ ಮಾದರಿಯಾದ ನಡೆ ಅನುಸರಿಸಲು ಪ್ರಯತ್ನಿಸುತ್ತೇವೆ. ಅಂಬೇಡ್ಕರ್ ಸಂವಿಧಾನದಂತೆ ರಾಜ್ಯದಲ್ಲಿ ಏನೇ ನಡೆದರೂ ಬೆಂಬಲಿಸುತ್ತೇನೆ.