LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಾಗಿದೆ ಎಂದ ಯೋಗೀಶ್ ಬಾಬು

ನಾಯಕನಹಟ್ಟಿ : ದಾವಣಗೆರೆ, ಬಾಗಲಕೋಟೆ ಉಪಚುನಾವಣೆಗಳಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಾಗಿದೆ ಎಂದು ದ್ರಾಕ್ಷಿ ರಸ ಮತ್ತು ವೈನ್ ಮಂಡಳಿ ಅಧ್ಯಕ್ಷ ಡಾ. ಬಿ.ಯೋಗೇಶ್‌ಬಾಬು ಭವಿಷ್ಯ ನುಡಿದಿದ್ದಾರೆ.

 

ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಪ್ರಚಾರಕ್ಕೆಂದು ಹೋಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2028ರಲ್ಲಿ ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರು.

ರಾಜ್ಯ ಸರ್ಕಾರ ಬಡವರ, ನಿರ್ಗತಿಕರ ಕಲ್ಯಾಣಕ್ಕಾಗಿ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಯೋಜನೆಗಳು ಜನಪ್ರಿಯವಾಗಿವೆ. ಜನರಿಗೆ ಅನುಕೂಲವಾಗುವಂತಹ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ಕಾಂಗ್ರೆಸ್ ಪಕ್ಷದಿಂದ ನೀಡಲಾಗುತ್ತಿದೆ ಎಂದರು ಕಾಂಗ್ರೆಸ್ ಸರ್ಕಾರ ಎಂದಿಗೂ ಬಡವರ ಪರವಾಗಿ ಇರುವ ಪಕ್ಷ. ಪಂಚ ಗ್ಯಾರೆಂಟಿ ಯೋಜನೆಗಳು ಕಡುಬಡವರ, ದುರ್ಬಲರ ಬಾಳನ್ನು ಬೆಳಗಿಸಿವೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯು ನನ್ನ ನೇತೃತ್ವದಲ್ಲಿ ನಡೆಯಲಿದೆ ಎಂದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ