LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಶಿಲ್ಪಾ ಸೂರಜ್ ಹೆಗ್ಡೆ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದ ಸಿಎಂ ಡಿ ಕೆ ಶಿವಕುಮಾರ್

 

ಬೆಂಗಳೂರು : ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಂಗಳವಾರ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು.

 

ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಮಾಜಿ ಸಿಎಂ, ಸಿಡಬ್ಲ್ಯೂಸಿ ಸದಸ್ಯರಾದ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಬಿಇಎಲ್ ರಸ್ತೆ ನಿವಾಸದಲ್ಲಿ ಅಂತಿಮ ನಮನ ಸಲ್ಲಿಸಿದರು.

 news_1781017535_2_742.webp

 

ರಾಹುಲ್ ಗಾಂಧಿ ಅವರು ಸೂರಜ್ ಹೆಗಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಸಲ್ಲಿಸಿದರು. ಸೂರಜ್ ಹೆಗ್ಡೆ ಅವರ ಪತ್ನಿ ಶಿಲ್ಪಾ, ಪುತ್ರರಾದ ಸಮೃಧ್, ವಿಶೃತ್ ಹಾಗೂ ಕುಟುಂಬ ಸದಸ್ಯರಿಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಂತ್ವನ ಹೇಳಿ, ಧೈರ್ಯ ತುಂಬಿದರು. ನಂತರ ಸೂರಜ್ ಹೆಗ್ಡೆ ಅವರ ನಿವಾಸದ ಬಳಿಯೇ ಸಕಲ ಸರ್ಕಾರಿ ಗೌರವವನ್ನು ಅರ್ಪಿಸಲಾಯಿತು.

 

ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಪೊಲೀಸ್ ಬಂದೂಕು ಪಡೆ ಗೌರವ ಸಲ್ಲಿಸಿತು. ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂರಜ್ ಅವರ ಪತ್ನಿ ಶಿಲ್ಪಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಉಮ್ಮಳಿಸಿ ಬಂದ ದುಃಖ ತಾಳಲಾರದೇ ಬಿಕ್ಕಿ, ಬಿಕ್ಕಿ ಅಳುತ್ತಿದ್ದ ಅವರಿಗೆ ಸಾಂತ್ವನ ಹೇಳಿದರು. ಧ್ವಜ ಹಸ್ತಾಂತರದ ವೇಳೆ ಭಾವುಕರಾದ ಡಿ.ಕೆ.ಶಿವಕುಮಾರ್ ಅವರು ಇಡೀ ಪಕ್ಷ ನಿಮ್ಮ ದುಃಖದಲ್ಲಿ ಭಾಗಿಯಾಗಿದೆ, ನಿಮ್ಮ ಕುಟುಂಬದ ಜತೆ ನಾವಿದ್ದೇವೆ ಎಂದು ಸಂತೈಸಿದರು.

 news_1781017535_1_326.webp

 

ಇದಕ್ಕೂ ಮೊದಲು ಸಿಎಂ ಡಿ.ಕೆ.ಶಿವಕುಮಾರ್ ಅವರು ಅಂತಿಮ ಗೌರವ ಸಲ್ಲಿಸಲು ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜತೆ ಬರಮಾಡಿಕೊಂಡರು. ಅಂತಿಮ ನಮನದ ನಂತರ ವಿಮಾನ ನಿಲ್ದಾಣಕ್ಕೆ ಮತ್ತೆ ತೆರಳಿ ಬೀಳ್ಕೊಟ್ಟರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ