LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಎತ್ತುಗಳ ಸಾವು: ₹50 ಸಾವಿರ ಪರಿಹಾರ ವಿತರಣೆ

ಬಳ್ಳಾರಿ: ತಾಲೂಕಿನ ರೂಪನಗುಡಿ ಗ್ರಾಮದ ಗಂಗಾಮತಸ್ಥರ ಜಯಣ್ಣ ತಂದೆ ತಮ್ಮಣ್ಣ ಅವರು ಹೊಲಕ್ಕೆ ಹೋಗುವ ಸಂದರ್ಭದಲ್ಲಿ ಎತ್ತಿನ ಗಾಡಿ ಆಕಸ್ಮಿಕವಾಗಿ ರಸ್ತೆ ಪಕ್ಕದಲ್ಲಿರುವ ಗ್ರೇವೆಲ್ ಗುಂಡಿಗೆ ಬಿದ್ದ ಪರಿಣಾಮ ಎತ್ತುಗಳು ಸಾವನ್ನಪ್ಪಿದ ದುರ್ಘಟನೆ ಜೂನ್ 29ರಂದು ಬೆಳಿಗ್ಗೆ 6:30ಕ್ಕೆ ಸಂಭವಿಸಿದೆ. ಘಟನೆಯಲ್ಲಿ ಗಾಡಿಯಲ್ಲಿದ್ದ ಜಯಣ್ಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯ ವಿಷಯ ತಿಳಿದ ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ  ಬಿ.ನಾಗೇಂದ್ರ ಅವರ ಸೂಚನೆ ಮೇರೆಗೆ ಅವರ ಆಪ್ತರಾದ ಗೋವರ್ಧನ ರೆಡ್ಡಿ ಅವರು ಮಂಗಳವಾರ (50,000) ಐವತ್ತು ಸಾವಿರ ರೂಪಾಯಿಗಳನ್ನು ಪರಿಹಾರ ಧನವನ್ನು ಜಯಣ್ಣ ಅವರಿಗೆ ವಿತರಿಸಿದರು.



ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ನಾಗರಾಜ್, ರಾಜೇಶ್, ವಿ.ಎನ್ ಶ್ರೀನಾಥ್ ರೂಪನಗುಡಿ ಗಂಗಪ್ಪ, ಯರ್ರಿಸ್ವಾಮಿ, ರಾಮಾಂಜಿನಿ, ಶಿವಶಂಕರ್, ಹೊನ್ನೂರಸ್ವಾಮಿ, ಕೃಷ್ಣಪ್ಪ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಅವರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ