LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರನ್ನ ಭೇಟಿಯಾದ ಕರ್ನಾಟಕ ಪತ್ರಕರ್ತರ ಸಂಘದ ನಿಯೋಗ

ಬಳ್ಳಾರಿಯಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೆಳನ ಉದ್ಘಾಟಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

 

ಬೆಂಗಳೂರು: ಗಣಿನಗರಿ ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿ 19 ಮತ್ತು 20 ರಂದು ನಗರದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷರವರು ತಿಳಿಸಿದರು.

 

ಇಂದು ರಾಜಭವನದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ.ಶಿವಪೂಜಿರವರ ನೇತೃತ್ವದ ನಿಯೋಗದಲ್ಲಿ ಇಂದು ರಾಜ್ಯಪಾಲರನ್ನ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.



ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿಯಲ್ಲಿ ಐತಿಹಾಸಿಕ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ದೇಶದ 15 ರಿಂದ 18 ರಾಜ್ಯಗಳ ಪತ್ರಕರ್ತ  ಪ್ರತಿನಿಧಿಗಳು ಸುಮಾರು 500 ಜನ ಭಾಗವಹಿಸಲಿದ್ದು, ಎರಡು ದಿನಗಳ ಕಾಲ ಸಮ್ಮೇಳನ ಬಳ್ಳಾರಿ ನಗರದಲ್ಲಿ ಅದ್ಧೂರಿಯಾಗಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನ ರಾಜ್ಯಪಾಲರು ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಭಾಗವಹಿಸುತ್ತಿದ್ದು ಬಳ್ಳಾರಿಯಲ್ಲಿ ಎರಡು ದಿನಗಳ ಕಾಲ ಪತ್ರಕರ್ತರ ಹಬ್ಬ ನಡೆಯಲಿದೆ ಎಂದರು.

 

ಫೆಬ್ರುವರಿ 19 ರಂದು ಮಧ್ಯಾಹ್ನ 3 ಗಂಟೆಯಿಂದ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಸಮಿತಿ ಸದಸ್ಯರನ್ನೊಳಗೊಂಡ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲು ಫೆಬ್ರುವರಿ 20 ರಂದು ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು ದೇಶದ ಆನೇಕ ರಾಜ್ಯಗಳ ಹಲವು ಖ್ಯಾತ ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಯಾಳ್ಪಿ ವಲಿಭಾಷ ತಿಳಿಸಿದರು.



ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ ಶಿವುಪೂಜಿ, ಸಂಘದ ರಾಜ್ಯ ಉಪಾಧ್ಯಕ್ಷ ಮಂಗಳೂರು ಸುರೇಶ್, ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಕೆ.ಬಜಾರಪ್ಪ, ಸೇರಿದಂತೆ ರಾಜ್ಯ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST