LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯ

ಬೆಂಗಳೂರು; ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಶೀಘ್ರವೇ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

 

ಚುನಾವಣಾ ಪ್ರಣಾಳಿಕೆಯಲ್ಲಿನ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿರುವಂತೆ, ತುಳು ಭಾಷೆಗೆ ನೀಡಿರುವ ಈ ಮಹತ್ವದ ಆಶ್ವಾಸನೆಗಳನ್ನೂ ಆದ್ಯತೆಯೊಂದಿಗೆ ಈಡೇರಿಸಬೇಕು.

 

ತುಳುವ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿರುವ ತುಳು ಭಾಷೆಯ ಅಭಿವೃದ್ಧಿಗೆ ಸರ್ಕಾರ ಸ್ಪಷ್ಟವಾದ ಹೆಜ್ಜೆ ಇಡಬೇಕಾಗಿದೆ. ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಅಧಿವೇಶನದಲ್ಲಿಯೇ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಯ ಕುರಿತು ಸರ್ಕಾರ ಘೋಷಣೆ ಮಾಡಬೇಕು ಎಂದು ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕರ್ನಾಟಕ ರಾಜ್ಯ ಅಧ್ಯಕ್ಷ ಶ್ರೀ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಭಿಪ್ರಾಯಪಟ್ಟರು.

 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶ್ರೀ ಮಾಳ ಹರ್ಷೇಂದ್ರ ಜೈನ್  ಹಾಗೂ ರಾಜ್ಯ ಸಂಚಾಲಕ ಶ್ರೀ ಅಭಿಷೇಕ್ ಕೆ. ಕಾರ್ಕಳ ಹಾಗೂ ತುಳುವ ಮಹಾಸಭೆಯ ಬೆಂಗಳೂರು ವಲಯದ  ಅಧ್ಯಕ್ಷರಾದ ಪುರುಷೋತ್ತಮ ಚೇಂಡ್ಲ, ಪ್ರಧಾನ ಸಂಚಾಲಕರಾದ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಸಾಲ್ಯಾನ್ ಅವರು ಸಹ ಸರ್ಕಾರವು ತುಳುವರಿಗೆ ನೀಡಿರುವ ಈ ಭರವಸೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಒತ್ತಾಯಿಸಿದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ