LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅವಹೇಳನ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ನಾಯಕನಹಟ್ಟಿ : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಕುಟುಂಬವನ್ನು ಅವಹೇಳನ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸದಸ್ಯರು ನಾಢಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ನೂರಾರು ವರ್ಷಗಳಿಂದ ಧರ್ಮಸ್ಥಳದಲ್ಲಿ ಧಾರ್ಮಿಕ ಭಾವನೆ ಇದೆ. ಧರ್ಮಾಧಿಕಾರಿಗಳು ಬಡವರ ಉದ್ಧಾರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ರಾಜ್ಯದಾದ್ಯಂತ ನಿರ್ಮಾಣಗೊಂಡಿರುವ ದೇವಾಲಯಗಳಿಗೆ ಧನ ಸಹಾಯ ಮಾಡಿದ್ದಾರೆ. ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡುತ್ತಿದ್ದಾರೆ. ಇದನ್ನು ಸಹಿಸದ ಧರ್ಮವಿರೋಧಿಗಳ ಗುಂಪು ಷಡ್ಯಂತ್ರ ರೂಪಿಸಿ ಅವರಿಗೆ ಸಂಬಂಧವೇ ಇಲ್ಲದ ಯಾವುದೋ ಪ್ರಕರಣಗಳನ್ನು ಕೆದಕುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

 

‘ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಕಾರಣ ಭಕ್ತರಿಗೆ ಅಪಾರವಾದ ನೋವು ಉಂಟಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ನಿಲ್ಲಬೇಕು. ಎಸ್ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಮಾಡುವಂತಿದೆ. ಕೂಡಲೇ ಎಸ್‌ಐಟಿ ಅಧಿಕಾರಿಗಳು ಮಧ್ಯಂತರ ವರದಿ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ಮತಾಂಧ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿವೆ. ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವಧೆ ಮಾಡಲಾಗುತ್ತಿದೆ. ಕಿಡಿಗೇಡಿಯೊಬ್ಬನು ನೀಡಿದ ದೂರನ್ನು ಪರಿಗಣಿಸಿ ಅವನು ತೋರಿಸಿದ ಜಾಗವನ್ನು ಅಗೆಯಲಾಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು’ ಎಂದು ಒತ್ತಾಯಿಸಿದರು.

ನಿವೃತ್ತ ತಹಶೀಲ್ದಾರ್ ಎನ್ ರಘುಮೂರ್ತಿ ಮಾತನಾಡಿ ಎಲ್ಲರಿಗೂ ಒಳಿತನ್ನು ಬಯಸುವ ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ನೋವುಂಟು ಮಾಡುವ ರೀತಿಯಲ್ಲಿ ನಡೆದುಕೊಳ್ಳಲಾಗುತ್ತಿದೆ. ಎಲ್ಲಾ ದುಷ್ಟಶಕ್ತಿಗಳಿಗೂ ತಕ್ಕ ಉತ್ತರ ನೀಡಬೇಕಾಗಿದೆ. ಧಾರ್ಮಿಕ ಕೇಂದ್ರಗಳ ಶಕ್ತಿ ಕುಗ್ಗಿಸುವ ಕೆಲಸ ಎಲ್ಲಿ ನಡೆಯುತ್ತಿದೆಯೋ ಅಲ್ಲಿ ಜಾಗೃತಿ ಸಮಾವೇಶ ಹಮ್ಮಿಕೊಂಡು ಹಿಂದೂ ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಮಾಡಬೇಕಾಗಿದೆ. ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ನಾವು ಸಿದ್ಧರಾಗಿದ್ದೇವೆ’ ಎಂದರು. ಧರ್ಮಸ್ಥಳ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಕೋಟ್ಯಾಂತರ ಭಕ್ತರು ಹೊಂದಿರುವ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ ಎಂದು ಹೇಳಿದರು. ನಿರಂತರವಾಗಿ 2 ತಿಂಗಳಿನಿAದ ಚಿತ್ರದುರ್ಗ ಶಿವಮೊಗ್ಗ, ಮಂಗಳೂರು ಸೇರಿದಂತೆ 12 ಜಿಲ್ಲೆಯಲ್ಲಿರುವಂತಹ ಭಕ್ತಾಧಿಗಳಿಗೆ ತುಂಬ ಅಘಾತವಾದ ಭಕ್ತಿ ಮೇಲೆ ಧಕ್ಕೆ ಬಂದಿದೆ. ಯಾವುದೇ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಅವಹೇಳನಕಾರಿ ಘಟನೆಗಳು, ಪೋಸ್ಟ್ಗಳು ಹಾಕದಂತೆ ಸರ್ಕಾರ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ. ಅದು ನಮ್ಮ ಹಕ್ಕು, ಒತ್ತಾಯ ಹಾಗಾಗಿ ಇಂದು ನಾವೆಲ್ಲರೂ ದೇವರ ಮೇಲಿನ ನಂಬಿಕೆಯಿAದ ಬದುಕುತ್ತಿದ್ದೇವೆ. ಧರ್ಮಸ್ಥಳ ಶ್ರೀ ಮಂಜುನಾಥಯ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವರ ಪೋಸ್ಟ್ಗಳು ಹರಿದಾಡುತ್ತಿದ್ದು ನಮ್ಮೆಲ್ಲರ ಮನಸ್ಸುಗಳು ನೊಂದು ಹೋಗಿವೆ ಎಂದು ಹೇಳಿದರು.



ರೇಖಲಗೆರೆ ದೇನಭಗತ್‌ಸ್ವಾಮೀಜಿ ಮಾತನಾಡಿ ರಾಜ್ಯ ಸೇರಿದಂತೆ ಹೊರ ರಾಜ್ಯದ ಕೆಲ ಹಿಂದೂ ವಿರೋಧಿ ಶಕ್ತಿಗಳು ಸನಾತನ ಕ್ಷೇತ್ರ ಶ್ರೀ ಧರ್ಮಸ್ಥಳ ವಿರುದ್ದ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಗಡಿವೆ. ಅನಾಮಿಕ ಮಾಡಿದ ಆರೋಪ ಸತ್ಯವಾದುದ್ದಲ್ಲ. ತನಿಖೆಯ ಹೆಸರಿನಲ್ಲಿ ಧರ್ಮಸ್ಥಳ ತೇಜೋವಧೆ ಸಲ್ಲದು ಎಂದು ಆಕ್ರೋಷ ವ್ಯಕ್ತಪಡಿಸಿದರು.

ಮುಸ್ಟೂರು ಓಂಕಾರ ಹುಚ್ಚನಾಗಲಿಂಗೇಶ್ವರ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದರಿಂದ ಭಕ್ತರಿಗೆ ನೋವುಂಟಾಗಿದೆ ಎಸ್.ಐ.ಟಿ. ಅಧಿಕಾರಿಗಳು ನಡೆಸುತ್ತಿರುವ ತನಿಖೆಗೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶೃದ್ಧೆಗೆ ಅಪಚಾರ ಮಾಡುವಂತಿದೆ. ಆಗಾಗಿ ಸರ್ಕಾರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಬಿ.ಶಕುಂತಲರವರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮಸ್ಥರಾದ ಎಂ.ವೈ.ಟಿ.ಸ್ವಾಮಿ, ಕೆ.ಎಂ.ಶಿವಸ್ವಾಮಿ, ತ್ರಿಶೂಲ್‌ಕುಮಾರ್, ವೇಣುಗೋಪಾಲ್, ಪಿ.ಶಿವಣ್ಣ, ತಾರಕೇಶ್, ಎ.ರಾಜಪ್ಪ, ಹುಚ್ಚಮಲ್ಲಯ್ಯ, ಸ್ವಾಮಿ, ಹೆಚ್.ಡಿ.ರಾಜೇಂದ್ರ, ಧರ್ಮಸ್ಥಳ ಸಂಘದ ಮಹಿಳೆಯರು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST