LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಸಂಶೋಧಕರಿಗೆ ಯುಜಿಸಿ ಮಾದರಿಯ ವಿದ್ಯಾರ್ಥಿ ವೇತನ ನೀಡಲು ಆಗ್ರಹ

ಬೆಂವಿವಿಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಯುಜಿಸಿ ಮಾದರಿಯ ಜೆಆರ್ ಎಫ್, ಎಸ್ಆರ್ ಎಫ್ ಫೆಲೋಶಿಪ್ ಗೆ ಮನವಿ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನಿಯೋಗದಿಂದ ರಾಜ್ಯದ ಪ್ರತಿಯೊಬ್ಬರ ಸಂಶೋಧನಾರ್ಥಿಗಳಿಗೆ (ಪಿಎಚ್.ಡಿ) ಯುಜಿಸಿ ಮಾದರಿಯಲ್ಲಿ ಜೆಆರ್ ಎಫ್ ಮತ್ತು ಎಸ್ಆರ್ ಎಫ್ ಫೆಲೋಶಿಪ್ ಜಾರಿಗೆ ತರಲು ಸರ್ಕಾರದ ಜೊತೆಯಲ್ಲಿ ಚರ್ಚಿಸಿ ನಿರ್ಣಯವನ್ನು ತೆಗೆದುಕೊಳ್ಳಲು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಮಾಡಲಾಯಿತು.

 

ರಾಜ್ಯದ ನಾನಾ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪರೀಕ್ಷೆ ಬರೆದು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿರುವ ಅರ್ಹ ಸಂಶೋಧನಾರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿಯಮಾವಳಿಗಳ ಮಾದರಿಯಲ್ಲೇ ಮಾಸಿಕ ಫೆಲೋಶಿಪ್ ಒದಗಿಸಬೇಕೆಂದು ಆಗ್ರಹಿಸಿದರು.

 

​ರಾಜ್ಯಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಅರ್ಹತೆಯ ಆಧಾರದ ಮೇಲೆ ಸಂಶೋಧನೆಗೆ ನೊಂದಾಯಿತರಾಗಿರುವ ವಿದ್ಯಾರ್ಥಿಗಳಿಗೆ ಮಾಸಿಕ ಜೆಆರ್ ಎಫ್ 50,000,  ಎಸ್ಆರ್ ಎಫ್ 55,000ರಂತೆ ನಿಯಮಿತ ಫೆಲೋಶಿಪ್ ಮಂಜೂರು ಮಾಡಬೇಕು ಎಂಬುದು ಒಕ್ಕೂಟದ ಮುಖ್ಯ ಬೇಡಿಕೆ ಎಂದರು.

 news_1791480548_0_216.webp

 

​ಸಮಾನ ಅವಕಾಶ ಮತ್ತು ಆರ್ಥಿಕ ಭದ್ರತೆ: ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಗಳಲ್ಲಿ (ಎನ್ಇಟಿ / ಜೆಆರ್ ಎಫ್) ಉತ್ತೀರ್ಣರಾದ ಸಂಶೋಧಕರಿಗೆ ಸಿಗುವ ಸೌಲಭ್ಯಗಳಂತೆಯೇ, ರಾಜ್ಯಮಟ್ಟದ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾದ ಸಂಶೋಧಕರಿಗೂ ಸಮಾನ ಅವಕಾಶ ಮತ್ತು ಆರ್ಥಿಕ ಸೌಲಭ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

 

​ಉನ್ನತ ಮಟ್ಟದ ಸಂಶೋಧನೆಗೆ ಬೆಂಬಲ: ಅರ್ಹತೆಯ ಆಧಾರದ ಮೇಲೆ ಸಂಶೋಧನೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆರ್ಥಿಕ ಪ್ರೋತ್ಸಾಹಧನ ದೊರೆತರೆ, ಅವರು ಯಾವುದೇ ಹಣಕಾಸಿನ ಮುಜುಗರವಿಲ್ಲದೆ ಗುಣಮಟ್ಟದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದು ರಾಜ್ಯದ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ.

 

​ಸಚಿವರಿಂದ ಸಕಾರಾತ್ಮಕ ಸ್ಪಂದನೆ: ​ವಿದ್ಯಾರ್ಥಿಗಳ ಮನವಿಯನ್ನು ಆಸಕ್ತಿಯಿಂದ ಆಲಿಸಿದ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ರಾಜ್ಯದಲ್ಲಿ ಉನ್ನತ ಶಿಕ್ಷಣ ಮತ್ತು ಗುಣಮಟ್ಟದ ಸಂಶೋಧನಾ ವಾತಾವರಣವನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸಂಶೋಧಕರ ನ್ಯಾಯಯುತ ಬೇಡಿಕೆಗಳ ಕುರಿತು ಸರ್ಕಾರದ ಹಂತದಲ್ಲಿ ಹಿರಿಯ ಅಧಿಕಾರಿಗಳ ಸಂಬಂಧಪಟ್ಟ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಶೀಘ್ರವೇ ಸೂಕ್ತ ಹಾಗೂ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

 

ಇದೇ ವೇಳೆಯಲ್ಲಿ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಎಂ.ಟಿ, ಗೌರವಾಧ್ಯಕ್ಷ ಶೇಷಾದ್ರಿ ಜಿ.ಸಿ, ಗೌರವ ಸಲಹೆಗಾರ ರವಿಕಾಂತ್ ಎನ್, ಉಪಾಧ್ಯಕ್ಷ ಅನಿಲ್ ಕುಮಾರ್ ವಿ, ಪ್ರಧಾನ ಕಾರ್ಯದರ್ಶಿ ಬಸವರಾಜು ಎಂ ಮುಸಲಾಪುರ, ಕಾರ್ಯದರ್ಶಿ ಸುನಿಲ್ ಹಸಾಳ್,   ಸದಸ್ಯರಾದ ಮಣಿಕಂಠ, ಪ್ರಜ್ವಲ್, ಸಂಶೋಧನಾ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

​ಯುಜಿಸಿ ಮಾದರಿ ಫೆಲೋಶಿಪ್ ಜಾರಿ ಮಾಡಲು ಕೇಂದ್ರ ಸರ್ಕಾರದ ಯುಜಿಸಿ ನಿಯಮಾವಳಿಯಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪರೀಕ್ಷೆ ಎದುರಿಸಿ ಪಿಎಚ್.ಡಿ ಪದವಿಗೆ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಸಂಶೋಧಕರಿಗೆ ಮಾಸಿಕ ಜೆಆರ್ ಎಫ್ 50,000,  ಎಸ್ಆರ್ ಎಫ್ 55,000ರಂತೆ ಧನಸಹಾಯವನ್ನು ತಕ್ಷಣದಿಂದ ಜಾರಿಗೆ ತರಬೇಕಿದೆ.

- ಶೇಷಾದ್ರಿ ಜಿ.ಸಿ, ಗೌರವಾಧ್ಯಕ್ಷರು, ಬೆಂಗಳೂರು ವಿವಿಯ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ