LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಜೆಸ್ಕಾಂನಲ್ಲಿ ಶೇ.40ರಷ್ಟು ಗುತ್ತಿಗೆ ನೌಕರರ ಕಡಿತ ಪ್ರಸ್ತಾವನೆ ಕೈಬಿಡಲು ಆಗ್ರಹ

ಬಳ್ಳಾರಿ : ಜೆಸ್ಕಾಂ ಬಳ್ಳಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 339 ಗುತ್ತಿಗೆ ನೌಕರರ ಪೈಕಿ ಶೇ.40ರಷ್ಟು ನೌಕರರನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೈಬಿಟ್ಟು, ಎಲ್ಲ ಗುತ್ತಿಗೆ ನೌಕರರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

 

ಈ ಕುರಿತು ಸಂಘದ ಅಧ್ಯಕ್ಷ ಡಾ. ಪ್ರಮೋದ್.ಎನ್ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಬಳ್ಳಾರಿ ವಲಯದ ವಿವಿಧ ಕಚೇರಿಗಳು ಹಾಗೂ ಕ್ಷೇತ್ರಗಳಲ್ಲಿ ಸುಮಾರು 339 ಹೊರಗುತ್ತಿಗೆ ನೌಕರರು ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

ಕಂಪ್ಯೂಟರ್ ಆಪರೇಟರ್, ಪರ್ಸನಲ್ ಅಸಿಸ್ಟೆಂಟ್, ಆಫೀಸ್ ಬಾಯ್, ಅಟೆಂಡರ್, ಸ್ಟೋರ್ ಹೆಲ್ಪರ್, ಲಾರಿ ಚಾಲಕ, ಸ್ವೀಪರ್ ಹಾಗೂ ವಾಚ್‌ಮನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಆಡಳಿತಾತ್ಮಕ ಕೆಲಸ, ಗ್ರಾಹಕರ ಸೇವೆ, ಬಿಲ್ಲಿಂಗ್, ದಾಖಲೆ ನಿರ್ವಹಣೆ, ಸ್ವಚ್ಛತೆ, ಭದ್ರತೆ ಸೇರಿದಂತೆ ಅಗತ್ಯ ಸೇವೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

 

ವೆಚ್ಚ ಕಡಿತದ ಕ್ರಮದ ಭಾಗವಾಗಿ ಗುತ್ತಿಗೆ ನೌಕರರ ಸಂಖ್ಯೆಯನ್ನು ಶೇ.40ರಷ್ಟು ಕಡಿತಗೊಳಿಸಿ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿರುವುದು ನೌಕರರಿಗೆ ತೀವ್ರ ಆತಂಕ ಉಂಟುಮಾಡಿದೆ. ಪ್ರಸ್ತಾವನೆ ಜಾರಿಯಾದರೆ ಬಳ್ಳಾರಿ ವಲಯದಲ್ಲಿಯೇ 135ಕ್ಕೂ ಹೆಚ್ಚು ನೌಕರರು ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ಸಂಘ ತಿಳಿಸಿದೆ.

 

ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರು ತಮ್ಮ ಕುಟುಂಬದ ಜೀವನೋಪಾಯಕ್ಕಾಗಿ ಈ ಉದ್ಯೋಗವನ್ನೇ ಅವಲಂಬಿಸಿದ್ದಾರೆ. ಕೋವಿಡ್ ಸೇರಿದಂತೆ ವಿವಿಧ ಸಂಕಷ್ಟದ ಸಂದರ್ಭಗಳಲ್ಲಿಯೂ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ನೌಕರರನ್ನು ಏಕಾಏಕಿ ಕೆಲಸದಿಂದ ಕಡಿತಗೊಳಿಸುವುದು ಸೂಕ್ತವಲ್ಲ ಎಂದು ಸಂಘದ ಮುಖಂಡರು ಹೇಳಿದ್ದಾರೆ.

 

ವೆಚ್ಚ ಕಡಿತಕ್ಕೆ ವಿದ್ಯುತ್ ಸೋರಿಕೆ ತಡೆ ಸೇರಿದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು. ನೌಕರರ ಉದ್ಯೋಗಕ್ಕೆ ಧಕ್ಕೆ ತರುವ ಕ್ರಮ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

 

ಸಂಘದ ಪ್ರಮುಖ ಬೇಡಿಕೆಗಳು: ಬಳ್ಳಾರಿ ಹಾಗೂ ಕಲಬುರ್ಗಿ ವಲಯಗಳಲ್ಲಿ ಶೇ.40ರಷ್ಟು ಗುತ್ತಿಗೆ ನೌಕರರನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ತಕ್ಷಣ ಕೈಬಿಡಬೇಕು. ಪ್ರಸ್ತುತ ಸೇವೆಯಲ್ಲಿರುವ ಎಲ್ಲ ನೌಕರರನ್ನು ಮುಂದುವರಿಸಬೇಕು. ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಿ, ಅವರನ್ನು ಖಾಯಂಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ