LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಜಾತಿ ಪ್ರಮಾಣ ಪತ್ರ ಹಾವಳಿ ತಪ್ಪಿಸಲು ಆಗ್ರಹ

ನಾಯಕನಹಟ್ಟಿ : ನಾಯಕ ತಳವಾರ ಹೆಸರಿನಲ್ಲಿ 2 ಲಕ್ಷಕ್ಕೂ ಹೆಚ್ಚಿಗೆ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಅನೇಕ ಸೌಲಭ್ಯಗಳನ್ನು ವಾಮ ಮಾರ್ಗದಲ್ಲಿ ಪಡೆದು ವಂಚಿಸುತ್ತಿರುವ ಬಗ್ಗೆ ಈಗಾಗಲೇ ಸರ್ಕಾರ ಗಮನ ಸೇಳಿದ್ದರು ಸಹ ಹಗಲು ದರೋಡೆಗೆ ಸರ್ಕಾರ ಕಡಿವಾಣ ಹಾಕದಿರುವುದು ವಿಷಾದನಿಯ ಎಂದು ವಾಲ್ಮೀಕಿ ಸಮಾಜ ಮುಖಂಡರುಗಳು ಹೇಳಿದರು.

 

ಪಟ್ಟಣದ ನಾಡಕಛೇರಿಯಲ್ಲಿ ಗುರುವಾರ ವಾಲ್ಮೀಕಿ ಸಮಾಜದ ಮುಖಂಡರುಗಳು ಉಪತಹಶೀಲ್ದಾರ್ ಶಕುಂತಲ.ಬಿ ರವರಿಗೆ ಮನವಿ ಸಲ್ಲಿಸಿದರು. ನಿಜವಾದ ನಾಯಕ ತಳವಾರರಿಗೆ ಸರ್ಕಾರದ ಮುರಾರ್ಜಿ ದೇಸಾಯಿ ಶಾಲೆಗಳಲ್ಲಿಯು ಪ್ರವೇಶ ಪಡೆಯಲು ನಕಲಿ ಜಾತಿ ಪತ್ರಗಳ ಹಾವಳಿಯಿಂದ ಸಾಧ್ಯವಾಗುತ್ತಿಲ್ಲ. ಈ ಅನ್ಯಾಯಗಳ ವಿರುದ್ಧ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಸಮಾಜ ಸಂಘಟನೆಗಳು ಮತ್ತು ಇತರೆ ಪರಿಶಿಷ್ಟ ಪಂಗಡದ ಸಂಘಟನೆಗಳು ನಿರಂತರವಾಗಿ ಅನೇಕ ಪ್ರತಿಭಟನೆಗಳನ್ನು ಮಾಡಿದ್ದರು ಸಹ ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರವರಿಗೆ ಮನವಿಗಳನ್ನು ನೀಡುತ್ತದ್ದರು ಸಹ ನಕಲಿ ಜಾತಿ ಪ್ರಮಾಣ ಪತ್ರಗಳು ಆವಳಿ ನಿಂತಿಲ್ಲ. ಸರ್ಕಾರ ಈ ಬಗ್ಗೆ ಅನೇಕ ಸುತ್ತೋಲೆಗಳನ್ನು ನೀಡಿದ್ದರು ಸಹ ತಹಶೀಲ್ದಾರ್ ರವರ ಕಛೇರಿಯಿಂದ ನಕಲಿ ಜಾತಿ ಪ್ರಮಾಣ ಪತ್ರಗಳು ಇನ್ನೂ ಮುಂದುವರೆಯುತ್ತಲೆ ಇವೆ ಎಂದರು.ತಪ್ಪತ್ತಸ್ಥರಿಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ವಾಲ್ಮೀಕಿ ಸಮಾಜ ಮುಖಂಡರುಗಳು ಅಸಮದಾನ ವ್ಯಕ್ತ ಪಡಿಸಿದರು.

ತಳವಾರ ಹೆಸರಿನಲ್ಲಿ ಕೋಳಿ, ಕಬ್ಬಲಿಗ, ಬೆಸ್ತ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲು ಪ್ರಾರಂಭ ಮಾಡಿದರು. ಈ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ರದ್ಧು ಪಡಿಸಲು ಎಸ್.ಟಿ. ಎಸ್.ಸಿ, ಓಬಿಸಿ ಕಾಯ್ದೆ ಕಲಂ 4 ಮತ್ತು 4ಎ ರಲ್ಲಿ ತಹಶೀಲ್ದಾರ್ ಮತ್ತು ಮೇಲಾಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಆದುದ್ದರಿಂದ ಈ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ. ಕಾಲೇಜು ಮತ್ತು ಉನ್ನತ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಸಾಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಹಣ ಬಿಡುಗಡೆ ಮಾಡಬೇಕು. ರಾಜ್ಯದ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿರುವ ವಾಲ್ಮೀಕಿ ಭವನಗಳನ್ನು ಪೂರ್ಣಗೊಳಿಸಲು, ಪರಿಶಿಷ್ಟ ಪಂಗಡದವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಹಾಯ ಧನ, ವಿದ್ಯಾರ್ಥಿ ವೇತನ ಬಾಕಿ ಬಿಡುಗಡೆಗೆ ರಾಜ್ಯ ಸರ್ಕಾರವು 500 ಕೋಟಿ ಅನುದಾನ ನೀಡಬೇಕು. ಬ್ಯಾಕ್‌ಲ್ಯಾಗ್ ಹುದ್ದೆಗಳನ್ನು ತುಂಬಬೇಕು, ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿ ಸಂಶೋಧನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ರಾಜ್ಯದಲ್ಲಿ ವಾಲ್ಮೀಕಿ ನಾಯಕ ಜನಾಂಗದ ಮೇಲೆ ನಿರಂತರ ದೌರ್ಜನ್ಯ, ಕೊಲೆ, ಅತ್ಯಚಾರ ಘಟನೆಗಳು ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಿದರು.



ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡುತ್ತಿರುವ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆದು ಸೂಕ್ರ ಭದ್ರತೆ ಒದಗಿಸಿಬೇಕೆಂದು ಆಗ್ರಹಿಸಿದರು. ಬೆಸ್ತ, ಅಂಬಿಗ, ಕÀಬ್ಬಲಿಗ, ಕುಬೇರ, ಕೂಲಿ, ಮುಂತಾದ ಜಾತಿಯವರಿಗೆ ನಾಯಕ ತಳವಾರು ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಕೂಡಲೇ ನಿಲ್ಲಸಬೇಕು. ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿ ಮಾಡಿದ ಹಣವನ್ನು ಗ್ಯಾರೆಂಟಿ ಕಾರ್ಯಕ್ರಮಗಳಿಗೆ ಹಣದ ಕೊರತೆಯಿಂದಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ತೊಂದರೆಯಾಗಿದೆ. ಇದರಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್, ಸಹಾಯಧನಗಳಿಗೆ ಕಳೆದ ಎರಡು ವರ್ಷಗಳಿಂದ ಹಣದ ಕೊರತೆಯಿಂದ ಸೌಲಭ್ಯಗಳು ಅರ್ಹ ಫಲಾಪೇಕ್ಷಿಗಳಿಗೆ ತಲುಪದಿರುವುದು ಅತ್ಯಂತ ದುರಾದೃಷ್ಟಕರ. ತಕ್ಷಣವೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ 10 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದರು.

 

ಈ ಸಂದರ್ಭದಲ್ಲಿ ಉಪಸ್ಥಿರಾದ ವಾಲ್ಮೀಕಿ ಸಮಾಜದ ಮುಖಂಡರುಗಳು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST