ಶುಕ್ರವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಘಟನೆಗಳ ಬಗ್ಗೆ ಸುಳ್ಳು ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಸರ್ಕಾರ ಎಸ್ ಐ ಟಿ ರಚಿಸಿರುವುದು ಖಂಡನೀಯ. ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಯತ್ನ ನಡೆಯುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಕೊಲೆಗಳಾಗಿವೆ ಎಂಬ ಸುಳ್ಳು ಹೇಳಿಕೆಗಳನ್ನು ನಂಬಿ ಸರ್ಕಾರ ಎಸ್ ಐ ಟಿ ರಚಿಸಿದೆ. ಇದು ಭಕ್ತರ ಭಾವನೆಗೆ ಅವಮಾನ. ಸರ್ಕಾರ ತಕ್ಷಣವೇ ಈ ಸುಳ್ಳು ಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಾತ್ಯಾತೀತ ಜನತಾದಳದ ವತಿಯಿಂದ ಇದೇ ೩೧ರಂದು ರಾಜ್ಯದಾದ್ಯಂತ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳದ ನೇತ್ರಾವತಿಯಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ ನೂರಾರು ಜನ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪ, ನಗರ ಘಟಕ ಅಧ್ಯಕ್ಷ ಮೀನಳ್ಳಿ ಹೊನ್ನೂರಪ್ಪ, ನಗರ ಯುವ ಘಟಕ ಅಧ್ಯಕ್ಷ ಕಿರಣ್ ಕುಮಾರ್ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.