LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾವು ಕಚ್ಚಿದ ಸಂದರ್ಭದಲ್ಲಿ ಹೆದರದಿರಿ

ಬಳ್ಳಾರಿ : ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಬಂದು ಉಚಿತ ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಗ್ರಾಮಪಂಚಾಯಿತಿ ಅಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ, ಸದಸ್ಯರಿಗೆ ಹಾವು ಕಡಿತ ಕುರಿತ ಕಾರ್ಯಾಗಾರದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಮರಿಯಂಬಿ.ವಿ.ಕೆ. ಮಾಹಿತಿ ನೀಡಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ, ಸಮುದಾಯ ಆರೋಗ್ಯ ಕೇಂದ್ರ ಮೋಕ ರವರ ಆಶ್ರಯದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ, ಸದಸ್ಯರಿಗೆ ಹಾವು ಕಡಿತದ ಕುರಿತು ಜಾಗೃತಿ ಕಾರ್ಯಾಗಾರದಲ್ಲಿ ಉದ್ದೇಶಿಸಿ ಮಾತನಾಡುತ್ತಾ ಹಾವು ಕಚ್ಚಿದಾಗ ಎಲ್ಲರೂ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೇನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಿ. ಈ ಅವಧಿಯಲ್ಲಿ ರೋಗಿಯನ್ನು ಕೂರಿಸಿ ಹಾವು ಕಚ್ಚಿರುವ ಭಾಗ ಹೃದಯದ ಕೆಳಗೆ ಬರುವ ಹಾಗೆ ಇರಲಿ ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆಯಿರಿ ಎಂದರು.



ಹಾವು ಕಚ್ಚಿದ ಭಾಗವು ಅಲುಗಾಡದಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣುಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಡಲು ಕಷ್ಟವಾಗಬಹುದು ಮುಂತಾದವುಗಳನ್ನು ಗಮನಿಸಬೇಕು. ಈ ರೀತಿಯಾದಲ್ಲಿ ನರಮಂಡಲಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ಹಾಗೆಯೇ ಗಾಯದ ಜಾಗದಲ್ಲಿ ತೀವ್ರ ಉರಿ, ನೋವುಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಅಂಗಾಂಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ದಯವಿಟ್ಟು ಈ ಲಕ್ಷಣಗಳನ್ನು ರೋಗಿಯ ಜೊತೆಗಿರುವ ವ್ಯಕ್ತಿಗಳು ವೈದ್ಯರಿಗೆ ತಿಳಿಸುವ ಮೂಲಕ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗುವುದೆಂದರು.


ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬೇಡಿ ಎಂದು ಮಾಹಿತಿ ನೀಡಿದರು. ಹಾಗೂ ಹಾವು ಕಡಿತ ಕುರಿತು ಸಾರ್ವಜನಿಕರಿಲ್ಲಿ ಜಾಗೃತಿ ನೀಡಲು ಗ್ರಾಮ ಪಂಚಾಯಿತಿ ಸಹಕಾರ ಅವಶ್ಯವಾಗಿದೆ ಮುಖ್ಯವಾಗಿ ಕಸ ವಿಲೆವಾರಿ ವಾಹನಗಳ ಮೂಲಕ ಆಡಿಯೋ ಜಿಂಗಲ್ಸ್ ಮುಖಾಂತರ ಮಾಹಿತಿ ಪ್ರಸರಣವಾಗುವಂತೆ ತಿಳಿಸಿದರು. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಸಿಬ್ಬಂದಿಯವರೊAದಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಸಹಕಾರ ನೀಡಲು ಕೋರಿದರು.



ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿಗಳು ಡಾ. ಭಾರತಿ, ಡಾ.ವಿಶಾಲಾಕ್ಷಿ, ಮೋಕ ಗ್ರಾಮಪಂಚಾಯಿತಿ ಅಧ್ಯಕ್ಷರು, ಭೈರದೇವನಹಳ್ಳಿ, ವಣೆನೂರು ಹಾಗೂ ಬಸರಕೋಡು ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಪಂಚಾಯಿತಿ ಸದಸ್ಯರು, ಸೆಕ್ರೆಟರಿಯವರು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಸಿಬ್ಬಂದಿ, ಮೋಕ ಆಸ್ಪತ್ರೆಯ ಅಧೀಕ್ಷಕರು, ಆಸ್ಪತ್ರೆ ಮೇಲ್ವಿಚಾರಣೆ ಸಿಬ್ಬಂದಿ ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST