LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಶಿವಪ್ಪ ಎನ್ ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪುತ್ತೇರಿ ಗ್ರಾಮದ ಶ್ರೀಮತಿ ವೈಲಮ್ಮ ಮತ್ತು ದಿವಂಗತ ನಾಗರಾಜಪ್ಪ ದಂಪತಿಯ ಹಿರಿಯ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಂಶೋಧನಾರ್ಥಿ  ಶಿವಪ್ಪ ಎನ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

 

ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ವೆಂಕಟರಮಣಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ " ಸೋಶಿಯಲಾಜಿಕಲ್ ಸ್ಟಡಿ ಆಫ್ ಕೆ.ಸಿ. (ಕೋರಮಂಗಲ ಚಲ್ಲಘಟ್ಟ) ವ್ಯಾಲಿ ವಾಟರ್ ಪ್ರಾಜೆಕ್ಟ್ ಇನ್ ಕೋಲಾರ ಡಿಸ್ಟ್ರಿಕ್ಟ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

ಪ್ರಸ್ತುತ ಶ್ರೀ ಶಿವಪ್ಪ ಎನ್ ಅವರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿರುವ ಸಿ.ಜಿ. ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

ಇದೇ ಸಂದರ್ಭದಲ್ಲಿ ಶಿವಪ್ಪ ಎನ್  ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಕಾಲೇಜಿನ ಸಿಬ್ಬಂದಿ ವರ್ಗದವರು, ಗುರು-ಹಿರಿಯರು, ಸ್ನೇಹಿತರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ