
ನಂತರ ಮಾತನಾಡಿದ ಮಾಜಿ ಸಚಿವ ಬಿ.ನಾಗೇಂದ್ರ ಅವರು ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ, ಇದು ಜೀವ ಉಳಿಸುವ ಒಂದು ಮಹತ್ತರ ಕಾರ್ಯ. ನೀವು ದಾನ ಮಾಡುವ ರಕ್ತದಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ಇದರಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ ಎಂದರು.
18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ವ್ಯಕ್ತಿಯು ತನ್ನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬಹುದು.

ರಕ್ತದಾನ ಮಾಡುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ರಕ್ತದಾನ ಮಾಡುವಾಗ ಮತ್ತು ಮಾಡಿದ ನಂತರ ಗಮನಿಸಬೇಕಾದ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಹೇಳಿದರು.
ಬಳ್ಳಾರಿಯ ರಾಮರಾಜು ಫೌಂಡೆಶನ್ ವತಿಯಿಂದ ಮೂರನೇ ಬಾರಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಫೌಂಡೇಶನ್ ಕಾರ್ಯ ಅಭಿನಂದನೀಯ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರು ಶ್ಲಾಘಿಸಿದರು.