LIVE TV StateNationalPoliticsCrimeEntertainmentSportsEducationFINANCE & TAXATION
Districts

ಪದ್ಮನಾಭನಗರ ವಾರ್ಡ್ ನಲ್ಲಿ ಡಾ. ರಾಜ್ ಕುಮಾರ್ ಪುತ್ಥಳಿ ಕೆಡವಲು ವ್ಯವಸ್ಥಿತ ಸಂಚು

ಉಗ್ರ ಹೋರಾಟಕ್ಕೆ ಅಭಿಮಾನಿಗಳು ಮತ್ತು   ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು : ಪದ್ಮನಾಭ ನಗರ ವಾರ್ಡ್ ನ ಪುಟ್ಟಲಿಂಗಯ್ಯ ರಸ್ತೆಯ ಗಣೇಶ ದೇವಸ್ಥಾನದ ಮುಂಭಾಗದ [ರಾಜ್ ಕಟ್ಟೆ] ಡಾ. ರಾಜ್ ಕುಮಾರ್ ಪುತ್ಥಳಿಯನ್ನು ಕೆಡವಲು ಬಿಡಿಎ ಕಾರ್ಯೋನ್ಮುಖವಾಗಿದ್ದು, ಯಾವುದೇ ಕಾರಣಕ್ಕೂ ಪುತ್ಥಳಿ ಉರುಳಿಸಬಾರದು ಎಂದು ಜನ ಸೇವಾ ಸಂಘ ಆಗ್ರಹಿಸಿದೆ. ಒಂದು ವೇಳೆ ಪುತ್ಥಳಿ ಕಡೆವಿದರೆ ಡಾ. ರಾಜ್ ಅಭಿಮಾನಿಗಳ ಸಂಘ ಮತ್ತು ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.

ಇತ್ತೀಚೆಗೆ ಡಾ. ವಿಷ್ಣುವರ್ಧನ್ ಸ್ಮಾರಕ ಉರುಳಿಸಿ ಕೆಂಗಣ್ಣಿಗೆ ಗುರಿಯಾಗಿದ್ದ ಘಟನೆ ಮಾಸುವ ಮುನ್ನವೇ ಕನ್ನಡದ ಮೇರುನಟನ ಪುತ್ಥಳಿ ಧ್ವಂಸಕ್ಕೆ ಮುಂದಾಗಿರುವ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.



ಈ ಸಂಬಂಧ ಜನ ಸೇವಾ ಸಂಘ ಗೃಹ ಸಚಿವರು ಮತ್ತು ಬಿಡಿಎಗೆ ಮನವಿ ಸಲ್ಲಿಸಿದೆ. ಇದು ಸಾರ್ವಜನಿಕರ ಉಪಯೋಗಕ್ಕೆ ಬಳಕೆಯಾಗುವ ಸಿಎ ಪಾರ್ಕ್ ಆಗಿದ್ದು, ಇದು ಬಿಬಿಎಂಪಿ ಮತ್ತು ಬಿಡಿಎ ಸ್ವತ್ತಾಗಿದೆ. 2005 – 6 ರಲ್ಲಿ ಇಲ್ಲಿ ವರನಟ ಡಾ. ರಾಜ್ ಕುಮಾರ್ ಪುತ್ಥಳಿ ಅನಾವರಣಗೊಳಿಸಲಾಗಿದೆ. ಇಲ್ಲಿ ಧ್ವಜಕಂಬವಿದ್ದು, ಇದು ಪದ್ಮನಾಭನಗರದ ಏಕೈಕ ಕನ್ನಡ ಧ್ವಜ ಸ್ತಂಭವಾಗಿದೆ. ಇಲ್ಲಿ ರಾಜ್ಯೋತ್ಸವ ಮತ್ತು ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರದೇಶ ಇದಾಗಿದೆ ಎಂದು ಹೇಳಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಜನ ಸೇವಾ ಸಂಘದ ಕಾರ್ಯದರ್ಶಿ ಸತೀಶ್, ಈ ಜಾಗದ ಮೇಲ್ಮನವಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಆದರೂ  ಓಂ ಪ್ರಕಾಶ್ ಎಂಬವರು ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಕಾನೂನು ಬಾಹಿರ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಓಂ ಪ್ರಕಾಶ್ ಎಂಬುವರದ್ದು ನಿವೇಶನ ಸಂಖ್ಯೆ 86. ಆದರೆ ಅಲ್ಲಿ ಮನೆ ನಿರ್ಮಿಸದೇ ಸಿಎ ನಿವೇಶದ ಮೇಲೆ ಕಣ್ಣಿಟ್ಟು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಬೆಳವಣಿಗೆಯಿಂದ ಡಾ. ರಾಜ್ ಅಭಿಮಾನಿಗಳು ಮತ್ತು ಕನ್ನಡಿಗರು ತೀವ್ರ ಆಕ್ರೋಶಗೊಳ್ಳುವಂತಾಗಿದೆ ಎಂದು ಹೇಳಿದ್ಧಾರೆ.



ಬಿಡಿಎ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಮಧ್ಯ ಪ್ರವೇಶಿಸಿ ಇಲ್ಲಿನ ಜಾಗದ ಯಥಾಸ್ಥಿತಿ ಕಾಪಾಡಬೇಕು. ಡಾ. ರಾಜ್ ಪುತ್ಥಳಿ ಕೆಡವಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗಲಿದೆ. ಹಾಗಾಗಿ ಡಾ. ಪುತ್ಥಳಿಗೆ ರಕ್ಷಣೆ ನೀಡಬೇಕು ಎಂದು ಸತೀಶ್ ಆಗ್ರಹಿಸಿದ್ಧಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂತಹ ಪದಬಳಕೆಯನ್ನು ನಿರೀಕ್ಷಿಸಿರಲಿಲ್ಲ – ಬಿಜೆಪಿ ಮುಖಂಡ ಪ್ರಭಾಕರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿಆರ್.ವಿ.ಐ.ಎಂ ನಲ್ಲಿ 2024–26ನೇ ಸಾಲಿನ ಎಂಬಿಎ ಮತ್ತು ಪಿ ಜಿ ಡಿ ಬಿ ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ;ಐಸಿಎಫ್ಎಐ ಕಾನೂನು ಶಾಲೆಯಲ್ಲಿ ಭಾರತದ ನಾಲ್ಕು ಕಾರ್ಮಿಕ ಸಂಹಿತೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ ಕಪ್ಪು ಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆಏಷ್ಯನ್‌ ಗೇಮ್ಸ್‌ ಪದಕ ವಿಜೇತ ಕೆಐಐಟಿ, ಕಿಸ್‌ ಸಾಧಕರಿಗೆ ಸನ್ಮಾನಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ.  ಮೊಳಕಾಲ್ಮೂರಿಗೆ ಹೊಸ ನಾಯಕತ್ವದ ಅಗತ್ಯ ಕೊಪ್ಪಳ ; ಎಸ್.ಐ.ಆರ್ ರದ್ದುಪಡಿಸಲು ಆಗ್ರಹಿಸಿ ಬೃಹತ್ ಪ್ರತಿರೋಧ ‘ತಿರಂಗಾ ಯಾತ್ರೆ’ಡಂಬಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಜಯಂತಿ ಆಚರಣೆ