ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಡಾ.ಸಿದ್ರಾಮ ವಾಘಮಾರೆ
ಬಳ್ಳಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕು ಮಾಣಿಕನಗರ ಜಲಸಂಗಿಯ ಡಾ.ಸಿದ್ರಾಮ ದಾದಾರಾವ್ ವಾಘಮಾರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿರುವ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಅವರು ಈ ಕುರಿತು ಆದೇಶ ಹೊರಡಿಸಿ ಶುಭ ಹಾರೈಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಇವರ ಅನುಮೋದನೆ ಮೇರೆಗೆ ಡಾ.ಸಿದ್ರಾಮ ದಾದಾರಾವ್ ವಾಘಮಾರೆ ಇವರು ರಾಜ್ಯ ಉಪಾಧ್ಯಕ್ಷರಾಗಿದ್ದು ಪಕ್ಷದ ರಾಜ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗುವಂತೆ ಮಧು ಬಂಗಾರಪ್ಪ ಸೂಚಿಸಿದ್ದಾರೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.