LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ಬಳ್ಳಾರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಆಯೋಜಿಸಲಾಗಿದ್ದ "ಛಾಯಾಚಿತ್ರ ಪ್ರದರ್ಶನ" ಕಾರ್ಯಕ್ರಮಕ್ಕೆ ಸಿರುಗುಪ್ಪ ತಹಶೀಲ್ದಾರರಾದ ಗೌಸಿಯಾ ಬೇಗಂ ಅವರು ಚಾಲನೆ ನೀಡಿದರು.

 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ  ನಿರ್ಮಿಸಲಾಗಿದ್ದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಿರುಗುಪ್ಪ ಕೆ.ಕೆ.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿಶೇಷ ಛಾಯಾಚಿತ್ರ ಪ್ರದರ್ಶನಕ್ಕೆ ಗಣ್ಯರು ಚಾಲನೆ ನೀಡಿದರು.

 

ಈ ವೇಳೆ ಸಿರುಗುಪ್ಪ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಾರುತಿ ವರಪ್ರಸಾದ ರೆಡ್ಡಿ, ಸಿರುಗುಪ್ಪ ನಗರಸಭೆ ಪೌರಾಯುಕ್ತ ಗಂಗಾಧರ, ಕೆಕೆಆರ್ ಟಿಸಿ ಸಿರುಗುಪ್ಪ ವಿಭಾಗದ ಕೆ.ಎ.ಶೇಕ್ಷಾವಲಿ ಸೇರಿದಂತೆ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.



ಸಿರುಗುಪ್ಪ ಕೆಕೆಆರ್.ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಛಾಯಾಚಿತ್ರಗಳು ಸಮೇತ ಮಾಹಿತಿ ಇರುವ  ಪ್ರದರ್ಶನ ಕಂಡು ಕಣ್ತುಂಬಿಕೊಳ್ಳಬಹುದಾಗಿದೆ.

 

ಕಾಂಗ್ರೆಸ್ ಮುಖಂಡ ಬಿ.ಎಂ.ಸತೀಶ್ ಅವರು ಮಾತನಾಡಿ, ರಾಜ್ಯ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸರ್ಕಾರಿ ಯೋಜನೆಗಳ ಕುರಿತಾಗಿ ಸಾರ್ವಜನಿಕರಿಗೆ ವಸ್ತು ಪ್ರದರ್ಶನದ ಮೂಲಕ ಅರಿವು ಮೂಡಿಸುತ್ತಿದೆ ಎಂದು ಹೇಳಿದರು.

 

ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ಧಿ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದರು.



ಜನರ ಗಮನಸೆಳೆದ ಛಾಯಾಚಿತ್ರಗಳು:

ಸಿರುಗುಪ್ಪ ಕೆ.ಕೆ.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಛಾಯಾಚಿತ್ರಗಳ ಪ್ರದರ್ಶನ  ಸಾರ್ವಜನಿಕ ಗಮನ ಸೆಳೆಯಿತು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರತಿಮೆಯ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿದರು.

 

ಜ.16 ರಿಂದ 18 ರ ವರೆಗೆ ಸಿರುಗುಪ್ಪ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತ ಏರ್ಪಡಿಸಿರುವ ವಸ್ತು ಪ್ರದರ್ಶನದಲ್ಲಿ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬಹುದಾಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ