LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಈಶ್ವರ್ ಚಂದ್ರ ವಿದ್ಯಾಸಾಗರರನ್ನು ಪ್ರತಿಯೊಬ್ಬ ಹೆಣ್ಣು ಮಕ್ಕಳು ಸ್ಮರಿಸಬೇಕು - ಈಶ್ವರಿ

ಬಳ್ಳಾರಿ: ಈ ಯುಗದಲ್ಲಿ ಶಿಕ್ಷಣ ಪಡೆದ ಪ್ರತಿಯೊಬ್ಬ ಹೆಣ್ಣು ಮಗಳು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಿಕೊಳ್ಳಬೇಕಾದ ವ್ಯಕ್ತಿತ್ವ ಈಶ್ವರ ಚಂದ್ರ ವಿದ್ಯಾಸಾಗರ್ ಅವರದ್ದಾಗಿದೆ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾಧ್ಯಕ್ಷೆ ಈಶ್ವರಿ ಅವರು ಹೇಳಿದರು.

 

ಇಲ್ಲಿನ ಪೂಜಾ ನರ್ಸಿಂಗ್, ಪ್ಯಾರಾ ಮೆಡಿಕಲ್ ಇನ್ಸಿಟಿಟ್ಯೂಷನ್ ನಲ್ಲಿ ಹಮ್ಮಿಕೊಂಡಿದ್ದ ಈಶ್ವರ್ ಚಂದ್ರ ವಿದ್ಯಾಸಾಗರ ಅವರ 134ನೇ ಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಅಂದಿನ ಕಟ್ಟಾ ಸಂಪ್ರದಾಯ ಪದ್ಧತಿಗಳ ವಿರುದ್ಧ ಹೋರಾಡಿದರು. ವಿಧವಾ ಪುನರ್ ವಿವಾಹಕ್ಕೆ ಪ್ರೋತ್ಸಾಹಿಸಿ ಬಾಲ್ಯ ವಿವಾಹ ದ ವಿರುದ್ಧ ಧ್ವನಿ ಎತ್ತಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಜೀವನ ಪರ್ಯಂತ ಶ್ರಮಿಸಿದ್ದಾರೆ. ಇಂದಿನ ಮಹಿಳಾ ಸಮುದಾಯಕ್ಕೆ ಈಶ್ವರಚಂದ್ರ ವಿದ್ಯಾಸಾಗರರಂತಹ ಮಹಾನ್ ವ್ಯಕ್ತಿಗಳವಿಚಾರಧಾರೆಯ ಅವಶ್ಯಕತೆಯಿದೆ ಎಂದು ಈಶ್ವರಿ ಹೇಳಿದರು.

 

ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ಮಾತನಾಡಿ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ ಶ್ರಮಿಸುತ್ತಿದೆ. ಮಹಿಳೆಯರ ಜ್ವಲಂತ ಸಮಸ್ಯೆಗಳಾದ ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ, ಅಪೌಷ್ಟಿಕತೆ, ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣಗಳು, ಅಭದ್ರತೆ, ಸ್ತ್ರೀಭ್ರೂಣ ಹತ್ಯೆ, ಲಿಂಗ ತಾರತಮ್ಯ ಹಾಗೂ ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಸಂಘಟಿಸುತ್ತಿದೆ ಎಂದು ಹೇಳಿದರು.



ಜಿಲ್ಲಾ ಜಂಟಿಕಾರ್ಯದರ್ಶಿ ವಿದ್ಯಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ರಹಿನಾ, ವಿದ್ಯಾರ್ಥಿಗಳು ಹಾಗೂ ಎಐಎಂಎಸ್ ಎಸ್ ನ ಪದಾಧಿಕಾರಿಗಳಾದ ರೇಖಾ, ಗಿರಿಜಾ ಇನ್ನಿತರರು ಉಪಸ್ಥಿತರಿದ್ದರು. 

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ