ಬಳ್ಳಾರಿ ತಾಲೂಕಿನ ಹಂದಿಹಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಟೖ ಬೆಲ್ಟ್ ವಿತರಣೆ ಮಾಡಿ ಮಾತನಾಡಿದರು. ಅವರು ಮಾತನಾಡುತ್ತ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಒಳ್ಳೆಯ ಸಂಬಳ ಮತ್ತು ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿದಲ್ಲಿ ಗ್ರಾಮೀಣ ಭಾಗದ ಶಾಲೆಗಳಿಂದ ದೊಡ್ಡಮಟ್ಟದ ಪ್ರತಿಭೆಗಳು ಹೊರಬರಲು ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊರಲಗುಂದಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಬಿ.ಪಿ ರವಿಚಂದ್ರ ಇವರು ಮಾತನಾಡುತ್ತಾ ಟಿ.ಎಚ್.ಎಂ ಸಾಂಸ್ಕೃತಿಕ ಕಲಾ ಟ್ರಸ್ಟ್ ಕೆಲಸವನ್ನು ಶ್ಲಾಘಿಸಿದರು. ಮತ್ತೊಬ್ಬ ಅತಿಥಿಗಳಾದ ಹಂದಿಹಾಳ್ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ವೈ.ಕವಿತ ಇವರು ಮಾತನಾಡುತ್ತಾ ಗ್ರಾಮೀಣ ಭಾಗದ ಶಾಲೆಗಳು ಅಭಿವೃದ್ಧಿ ಕಾಣಲು ಸರ್ಕಾರದ ಯೋಜನೆಗಳ ಜೊತೆಗೆ ಇಂಥ ದಾನಿಗಳ ಸಹಕಾರವು ಅಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಬಿ.ವೆಂಕಟೇಶ್ ಮಾತನಾಡಿ ಟಿ.ಹೆಚ್. ಎಂ ಸಾಂಸ್ಕೃತಿಕ ಕಲಾ ಟ್ರಸ್ಟ್ ಮಕ್ಕಳಿಗೆ ಮಹತ್ತರವಾದ ಕೆಲಸ ಮಾಡುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸದಸ್ಯರಾದ ಲಿಂಗಪ್ಪ, ಸುಭಾನ್ ಸಾಬ್ ಹಾಜರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿಯಾದ ಮಹಿಮಾ ಎಂ ಸಿ ನಿರ್ವಹಿಸಿದರು. ಶಿಕ್ಷಕಿ ನಾಹಿದಾ ಅಂಜುಮ್ ಸ್ವಾಗತಿಸಿ, ಗೀತಮ್ಮ ವಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಇವರಿಗೆ ಟಿ. ಎಚ್. ಎಂ ಸಾಂಸ್ಕೃತಿಕ ಕಲಾ ಟ್ರಸ್ಟ್ ಇವರಿಂದ ಸನ್ಮಾನಿಸಲಾಯಿತು.