LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಜೀವ ಜಲ ರಕ್ಷಣೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು

ಬೆಂಗಳೂರು : ಕುಡಿಯುವ ನೀರಿನ ಕುರಿತು ಪ್ರತಿಯೊಬ್ಬರೂ ಜನ ಜಾಗೃತಿ ಮೂಡಿಸಬೇಕು. ಜೀವ ಜಲ ರಕ್ಷಣೆಗಾಗಿ ಶ್ರಮಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕರೆ ನೀಡಿದ್ದಾರೆ.



ಸಂರಕ್ಷಣೆ ಮತ್ತು ಜಲಮೂಲಗಳ ಪುನಶ್ಚೇ ತನ ಕುರಿತು ರಾಷ್ಟ್ರಮಟ್ಟದ ಸ್ವಯಂ ಸೇವಾ ಮಹಿಳಾ ಸಂಘಟನೆ  “ಸಂಪೂರ್ಣ” ಮತ್ತು ತೇರಾಪಂತ್ ಮಹಿಳಾ ಮಂಡಲ, ವಿಜಯನಗರ ಸಂಘಟನೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನೆಲ, ಜಲ ಸಂರಕ್ಷಣೆಗೆ ವಿಶೇಷವಾಗಿ ಯುವ ಸಮೂಹ ಮುಂದಾಗಬೇಕು. ಆದರೆ ಮಹಿಳಾ ಸಂಘಟನೆಗಳು ಇಂತಹ ಮಹೋನ್ನತ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸ ತಂದಿದೆ. ಇಂತಹ ರಚನಾತ್ಮಕ ಹೋರಾಟಕ್ಕೆ ಪ್ರತಿಯೊಬ್ಬರೂ ಬೆಂಬಲಿಸಬೇಕು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳಲಿದೆ. ಹೀಗಾಗಿ ಈಗಿನಿಂದಲೇ ಜಲ ಸಾಕ್ಷರತೆ ಬಗ್ಗೆ ಅರಿವು ಮೂಡಿಸಬೇಕು. ಮುಂದಿನ ಪೀಳಿಗೆಗೆ ಸಮೃದ್ಧ ಜಲ ಸಂಪತ್ತನ್ನು ಉಳಿಸಿ, ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಎಂದರು.



ಸಂಪೂರ್ಣ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಶೋಭಾ ವಿಜಯೇಂದ್ರ ಸಿಂಗ್ ಮಾತನಾಡಿ, ನಮ್ಮ ಸಂಘಟನೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಎರಡನೇ ಅಭಿಯಾನ ಇದಾಗಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

ವಿಚಾರ ಸಂಕಿರಣದ ಸಂಚಾಲಕರಾದ ವೀಣಾ ಬೇದ್, ಮಾಧ್ಯಮ ಸಂಚಾಲಕರಾದ ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ