LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಗಣಿತ ಶಿಕ್ಷಕ ಜಿ ರಂಗನಾಥ್ ರಿಗೆ ಬೀಳ್ಕೊಡುಗೆ

ನಾಯಕನಹಟ್ಟಿ : ಹೋಬಳಿಯ ಮಲ್ಲೂರಹಳ್ಳಿ  ಗ್ರಾಮ ಪಂಚಾಯತಿ ವ್ಯಾಪ್ತಿಯ ರೇಖಲಗೆರೆ ಲಂಬಾಣಿಹಟ್ಟಿ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಜಿ ರಂಗನಾಥ್ ರವರನ್ನು  ಎನ್ ದೇವರಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಹೆಚ್ಚುವರಿ ಶಿಕ್ಷಕರಾಗಿ ವರ್ಗಾಣೆಗೊಂಡರಿಂದ ಅದ್ದೂರಿಯಾಗಿ ಬಿಳ್ಕೊಡಲಾಯಿತು.

 

ಗಣಿತ ಶಿಕ್ಷಕ ಜಿ ರಂಗನಾಥ್ ರವರು 17 ವರ್ಷ ಒಂದೇ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ, 3 ವರ್ಷ ಮುಖ್ಯ ಶಿಕ್ಷಕರಾಗಿ,12 ವರ್ಷ ಹಿರಿಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2021 ರಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಎಸ್ ಆರ್ ಬೊಮ್ಮಾಯಿ ರವರಿಂದ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

 

ಗಣಿತ ಕಠಿಣ ವಿಷಯವಾದರೂ ಸಹ ಶಾಲೆಯಲ್ಲಿ ಗಣಿತ ಪ್ರಯೋಗಾಲಯವನ್ನು ನಿರ್ಮಿಸಿ ಗಣಿತವನ್ನು ಸುಲಭವಾಗಿ ಪ್ರಾಯೋಗಿಕವಾಗಿ ಮಕ್ಕಳು ಕಲಿಯಲು ಸಹಕಾರಿಯಾಗಿರುತ್ತಾರೆ. ಜಿಲ್ಲೆಯ ಮೊಟ್ಟ ಮೊದಲ ಗಣಿತ ಪ್ರಯೋಗಾಲವನ್ನು ನಿರ್ಮಿಸಿ ಇತರ ಶಿಕ್ಷಕರಿಗೆ ಮಾದರಿಯಾಗಿರುತ್ತಾರೆ.

 

ಇವರು ಕರ್ತವ್ಯ  ನಿರ್ವಹಿಸುವ ಸಂದರ್ಭದಲ್ಲಿ ಶಾಲಾ ಕಚೇರಿ, ಸಿಬ್ಬಂದಿ ವರ್ಗದ ಕೊಠಡಿ, ಗಣಿತ ಹಾಗೂ ವಿಜ್ಞಾನ ವಿಷಯಗಳ ಪ್ರಯೋಗಾಲಯ, ಸೇರಿದಂತೆ ಗ್ರಂಥಾಲಯವನ್ನು ಮುಖ್ಯ ಶಿಕ್ಷಕರಾಗಿ ಅಭಿವೃದ್ಧಿಗೊಳಿಸಿರುತ್ತಾರೆ. ಪ್ರಸ್ತುತ ಎನ್ ದೇವನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಹೆಚ್ಚುವರಿ ಶಿಕ್ಷಕರಾಗಿ ವರ್ಗಾವಣೆಗೊಂಡರೂ ಸಹ ತಾಲ್ಲೂಕು ಗಣಿತ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಗಣಿತ ಸಂಘದ ನಿರ್ದೇಶಕರಾಗಿ, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಮತ್ತು ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

 

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ವೆಂಕಟೇಶ್,  ಎಸ್ ಡಿ ಎಂ ಸಿ ಅಧ್ಯಕ್ಷ ಕಾಟಯ್ಯ, ಹರಿಯಬ್ಬೆ ಉಪ ಪ್ರಿನ್ಸಿಪಾಲ್ ರುದ್ರಮುನಿ ಎಂ ಜೆ, ತಿಮ್ಮಪ್ಪಯ್ಯನಹಳ್ಳಿ ಪ್ರೌಢಶಾಲೆಯ ಗಣಿತ ಶಿಕ್ಷಕ ಶಿವಕುಮಾರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ಹಾಗೂ ಶಾಲಾ ಸಿಬ್ಬಂದಿ ವರ್ಗದವರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ