ದೂರದರ್ಶನದಲ್ಲಿ “ರೈತಮಿತ್ರ” ನೇರ ಫೋನ್-ಇನ್ ಕಾರ್ಯಕ್ರಮ
ಬೆಂಗಳೂರು: ಬೆಂಗಳೂರು ದೂರದರ್ಶನ ಕೇಂದ್ರ, ಕೃಷಿ ಇಲಾಖೆಯ ಸಹಯೋಗದಲ್ಲಿ “ರೈತಮಿತ್ರ” ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಿದ್ದು, ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶುಕ್ರವಾರ ಸಂಜೆ 6 ರಿಂದ 6.30 ರವರೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.
ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಸುಧಾರಿತ ಬೇಸಾಯ ಕ್ರಮಗಳು, ನೂತನ ತಂತ್ರಜ್ಞಾನ ಹಾಗೂ ಹವಾಮಾನ ಕುರಿತು ಆಯಾ ಹಂಗಾಮಿಗೆ ಅನುಗುಣವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ನಾಡಿನ ರೈತ ಬಾಂಧವರು ಕರೆ ಮಾಡಿ ಮಾಹಿತಿ ಪಡೆಯಬಹುದು. ಕರ್ನಾಟಕ ಸರ್ಕಾರದ ಕೃಷಿ ಸಚಿವರು, ಸಂಪನ್ಮೂಲ ಅಧಿಕಾರಿಗಳು, ವಿಜ್ಞಾನಿಗಳು ರೈತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
ಕರೆ ಮಾಡಬೇಕಾದ ಸಂಖ್ಯೆಗಳು: 2354 2599 ಹಾಗೂ 2354 2699
ಈ ಫೋನ್-ಇನ್ ಕಾರ್ಯಕ್ರಮ ಮರುದಿನ ಬೆಳಿಗ್ಗೆ 6 ಗಂಟೆಗೆ ಮತ್ತೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಯೂಟ್ಯೂಬ್ ನಲ್ಲಿಯೂ ಲಭ್ಯವಿರಲಿದೆ.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.