LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಉತ್ತಮ ಮುಂಗಾರು : ಬಿತ್ತನೆಗೆ ರೈತರ ಸಿದ್ದತೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಹಾಗೂ ನೈಋತ್ಯ ಮುಂಗಾರು ಅವಧಿ ಮುನ್ನವೇ ಪ್ರವೇಶಿಸಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದ್ದು, ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ.



ವಾಡಿಕೆಯಂತೆ ಜೂನ್ ಮೊದಲ ವಾರ ಅಥವಾ ನಂತರ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುತ್ತಿತ್ತು. ಆದರೆ, ಈ ಬಾರಿ ಮೇ 24ಕ್ಕೆ ಪ್ರವೇಶಿಸಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ, ಬಿತ್ತನೆಯೂ ನಿರೀಕ್ಷಿತ ಮಟ್ಟದಲ್ಲಿ ನಡೆಯಬಹುದು ಎಂದು ಅಂದಾಜಿಸಲಾಗಿದೆ.

2025ರ ಮೇನಲ್ಲಿ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ 764 ಮಿ.ಮೀ. ಮಳೆಯಾಗಿದೆ. 1918ರ ಮೇನಲ್ಲಿ 706 ಮಿ.ಮೀ. ಮಳೆಯಾಗಿತ್ತು. 2025ರ ಮೇನಲ್ಲಿ ರಾಜ್ಯಾದ್ಯಂತ 245 ಮಿ.ಮೀ. ಸುರಿದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ರೈತರಿಗೆ ಕೊರತೆ ಉಂಟಾಗದಂತೆ ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಕೃಷಿ ಇಲಾಖೆ ದಾಸ್ತಾನು ಮಾಡಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ ಕಾರ್ಯ ಆರಂಭವಾಗಿದೆ.



ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆ. ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಸರಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST