LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ರಸಗೊಬ್ಬರ ಕೃತಕ ಅಭಾವ ಸೃಷ್ಠಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಬಾರದು

ಅರಕೇರಾ : ರಸಗೊಬ್ಬರ ಕೃತಕ ಅಭಾವ ಸೃಷ್ಠಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಬಾರದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ ನಾಯಕ ಹೇಳಿದರು

ಪಟ್ಟಣದ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಮಾರಾಟಗಾರರಿಗೆ ಸೂಚನೆ ನೀಡಿದರು. ತಾಲೂಕಿನಲ್ಲಿ ಉತ್ತಮ ಪ್ರಮಾಣದಲ್ಲಿ ವಿವಿಧ ಬೆಳೆಗಳ ಬಿತ್ತನೆ ಕಾರ್ಯ ನಡೆದಿದೆ. ರೈತರಿಗೆ ಅಗತ್ಯವಿರುವ ರಸಗೊಬ್ಬರ ಮಾರಾಟ ಮಾಡಬೇಕು. ರಸಗೊಬ್ಬರವನ್ನು ಗೌಪ್ಯವಾಗಿ ಸಂಗ್ರಹಿಸಿ ಹೆಚ್ಚಿನ ಎಂ.ಆರ್.ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.



ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರಗಳನ್ನು ನೀಡಬೇಕು. ಒತ್ತಾಯ ಪೂರ್ವಕವಾಗಿ ವಲ್ಲದ ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಮಾಡಬಾರದು. ಸರ್ಕಾರ ನಿಗದಿಪಡಿಸಿದ ದರಪಟ್ಟಿಯನ್ನು ಮಾರಾಟ ಕೇಂದ್ರದಲ್ಲಿ ಹಾಕಬೇಕು. ಕಳಪೆ ಡಿಎಪಿ ರಸಗೊಬ್ಬರ ಕಂಡು ಬಂದರೆ ಕೂಡಲೇ ಕೃಷಿ ಇಲಾಖೆ ಗಮನಕ್ಕೆ ತರಬೇಕು. ರೈತರ ಪ್ರಗತಿಗೆ ಎಲ್ಲರೂ ಸಹಕರಿಸಬೇಕು. ಸರ್ಕಾರದ ಸೂಚನೆಗಳನ್ನು ನಿರ್ಲಕ್ಷö್ಯ ವಹಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ದಾಸ್ತಾನು ಸೀಜ್ ಮಾಡಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಹರ್ಷವರ್ಧನ ನಾಯಕ ದೊರೆ, ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ನಾಯಕ ಜಲ್ಲೆ, ಪ್ರಮುಖರಾದ ಹನುಮಗೌಡ ಚಡಕಲಗುಡ್ಡ, ಶಾಲಂ ಬಡಿಗೇರ, ರೆಡ್ಡಿ ಎಸ್ ನಾಯಕ ಇತರರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ