LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News Districts

ಖಾಸಗಿ ಶಾಲೆಗಳ ಶುಲ್ಕವನ್ನು ನಾಮಫಲಕಗಳಲ್ಲಿ ಅಳವಡಿಸಲು ಒತ್ತಾಯ

ನಾಯಕನಹಟ್ಟಿ :  ಖಾಸಗಿ ಶಾಲೆಗಳ ಶುಲ್ಕವನ್ನು ನಾಮ ಫಲಕಗಳಲ್ಲಿ ಅಳವಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ ಶೆಟ್ಟಿ ಬಣ) ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಒತ್ತಾಯಿಸಿ ಚಳ್ಳಕೆರೆ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು.

 

ನಾಯಕನಹಟ್ಟಿ ಹೋಬಳಿಯಲ್ಲಿರುವ ಖಾಸಗಿ ಶಾಲೆಗಳ ಶುಲ್ಕವನ್ನು ನಾಮಫಲಕಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಹಾಗೂ ಶಾಲೆಗಳಲ್ಲಿ ಕನ್ನಡ ಭಾಷೆಗೆ ಶೇಕಡ 60% ಮಾನ್ಯತೆ ನೀಡಬೇಕು. ನಾಯಕನಹಟ್ಟಿ ಹೋಬಳಿಯಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚಾಗಿ ನಾಯಕನಹಟ್ಟಿ ಪಟ್ಟಣದ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಲಾಗುತ್ತಿದ್ದು ಆದ್ದರಿಂದ ನಾಯಕನಹಟ್ಟಿ ಹೋಬಳಿಯ ಖಾಸಗಿ ಶಾಲೆಗಳ ಮುಖ್ಯಶಿಕ್ಷಕರುಗಳು ಎಲ್.ಕೆ.ಜಿ, ಯು.ಕೆ.ಜಿ ಇಂದ ಹಾಗೂ 1ನೇ ತರಗತಿಯಿಂದ 10ನೇ ತರಗತಿಯವರೆಗೂ ಆಯಾ ಶಾಲೆಗಳು ನೀವು ನಿಗಧಿ ಪಡಿಸಿದ ಶಾಲಾ ಶುಲ್ಕಗಳನ್ನು ನಾಮ ಫಲಕಗಳಲ್ಲಿ (ನೋಟೀಸ್ ಬೋರ್ಡ್) ಹಾಕಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

 

ಹೋಬಳಿ ಅಧ್ಯಕ್ಷರು ಬೋರಯ್ಯ ಎನ್., ನಗರ ಘಟಕದ ಅಧ್ಯಕ್ಷರು ಉಮೇಶ್, ಪ್ರಧಾನಕಾರ್ಯದರ್ಶಿ ಸುರೇಶ್, ಉಸ್ತುವಾರಿ ಎಂ.ಓಂಕಾರಪ್ಪ, ಪಾಪಣ್ಣ, ಕಾಟಂಲಿಂಗಯ್ಯ, ಉಪಾಧ್ಯಕ್ಷ ಪಾಪಣ್ಣ, ಪ್ರದೀಪ್, ಕೇಶವ, ಎಂ.ಸಿ.ರಮೇಶ್, ಪಾಲಯ್ಯ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಶಸ್ವಿಯಾಗಿ ನಡೆದ ಜಿಂದಾಲ್ ಸ್ಟೀಲ್ ಸಿಟಿ ರನ್ 2026ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್ಎಫ್ಪಿಆರ್ಸಿ ಕಾರ್ಯಾಗಾರ ಆಯೋಜನೆಕೊಪ್ಪಳದಲ್ಲಿ ಆ.04ಕ್ಕೆ ಬೃಹತ್ ಕಟ್ಟಡ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ : ಪೋಸ್ಟರ್ ಬಿಡುಗಡೆ'ಕಸಾಪ ಘನತೆ, ಗೌರವ ಎತ್ತಿ ಹಿಡಿದು ಪರಂಪರೆ ಉಳಿಸೋಣ: ಜಾಣಗೆರೆಸಾಮಾಜಿಕ ಬದಲಾವಣೆಗೆ ಪತ್ರಿಕೆಗಳ ಪಾತ್ರ ಮಹತ್ವದ್ದು - ಮೊಹಮ್ಮದ್ ಜುಬೇರಗೆಳೆತನ: ಮಾನವೀಯತೆಯ ಮಹಾಕಾವ್ಯಕೊತ್ತಲಚಿಂತ ಗ್ರಾಮದಲ್ಲಿ ಮಳೆಗಾಗಿ ಅಖಂಡ ಭಜನಾ ಸಪ್ತಾಹಕಳಪೆ ಆಹಾರ ಮಾರಾಟ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ ಆಕ್ರೋಶಸಮಾಜಮುಖಿ ವೃತ್ತಿಪರರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಉದ್ದೇಶ1.40 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ