ಅಂಜನಾದ್ರಿ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಪತ್ತೆ
ಕೊಪ್ಪಳ : ಜಿಲ್ಲೆಯ ಗಂಗಾವತಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ಅಂಜನಾದ್ರಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ನಡೆದಿದ್ದು, ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಹೌದು, ಇಂದು ಭಕ್ತರ ಸಮ್ಮುಖದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಅಮೇರಿಕಾ ಮತ್ತು ಥೈಲೆಂಡ್ ದೇಶದ ನೋಟುಗಳು ಕಂಡು ಬಂದಿವೆ. ಒಟ್ಟಾಗಿ 63,10,85 ರೂ.ಗಳು ಜಮೆ ಆಗಿದೆ.
ಎಣಿಕೆ ಕಾರ್ಯವನ್ನು ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಲಾಗಿದ್ದು, ಮಾ.28 ರಂದು ಹುಂಡಿ ಎಣಿಕೆ ಮಾಡಲಾಗಿತ್ತು. ಮೂರು ತಿಂಗಳ ನಂತರ ಮತ್ತೆ ಇಂದು ನಡೆದ ಎಣಿಕೆ ಕಾರ್ಯದಲ್ಲಿ ಅಂಜನಾದ್ರಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ರಾವ್, ಬ್ಯಾಂಕ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಹೋಂ ಗಾರ್ಡ್ಸ್ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.