LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಕಷ್ಟಗಳಿಗೆ ಸ್ಪಂದಿಸಿದ ಮಾಜಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ ಶ್ರೀ ಬಿ.ನಾಗೇಂದ್ರ ಅವರು ತಮ್ಮ ನಿವಾಸದ ಕಚೇರಿಗೆ ಮಂಗಳವಾರ ರಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಹಲವು ಸಮಸ್ಯೆಗಳನ್ನು ಬಗೆಹರಿಸಿದರು. ಇನ್ನು ಕೆಲವು ಸಮಸ್ಯೆಗಳಿಗೆ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.



ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್‌.ಡಿ.ಎಂ.ಸಿ ಪದಾಧಿಕಾರಿಗಳು ತಮ್ಮ ಶಾಲೆಗೆ ಬೇಕಾದ ಸೌಲಭ್ಯ ಕುರಿತು ಮನವಿ ಸಲ್ಲಿಕೆ, ವಿದ್ಯುತ್ ಸಂಪರ್ಕ ತಾಲ್ಲೂಕು ಪಂಚಾಯ್ತಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿದರು.

 

ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವೈಯಕ್ತಿಕ ಅಹವಾಲುಗಳ ಮನವಿ ಸೇರಿದಂತೆ ಸಾರ್ವಜನಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಅನಾಯೋಗ್ಯ ಕಾರಣ ಶಸ್ತ್ರಚಿಕಿತ್ಸೆ ಸಹಾಯ ಕೋರಿ ಅಹವಾಲು ತೋಡಿಕೊಂಡರು. ನಂತರ ಅವರಿಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಣದ ನೆರವು ನೀಡಿದರು.



ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಮೇಲಾಧಿಕಾರಿಗಳಿಗೆ ಫೋನ್ ಕರೆ ಮೂಲಕ ತಿಳಿಸಿ, ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಲು ಮಾಜಿ ಸಚಿವ ಬಿ.ನಾಗೇಂದ್ರ ಅವರು ಸೂಚಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST