LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಹೆಚ್.ವೈ.ಮೇಟಿ ನಿಧನ

ಬೆಂಗಳೂರು:  ಮಾಜಿ ಸಚಿವ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾದೇ ಕೊನೆಯುಸಿರೆಳೆದಿದ್ದಾರೆ.

 

ಜಯನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್ .ವೈ ಮೇಟಿ ಇಂದು ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ. ಕಾರ್ಡಿಯಾಕ್ ಅರೆಸ್ಟ್ನಿಂದ ಅವರು ನಿಧನರಾಗಿದ್ದಾರೆ.

 

ಅಕ್ಟೋಬರ್ 9, 1946 ರಲ್ಲಿ ಜನಿಸಿರುವ ಮೇಟಿ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುಳೇದ ಗುಡ್ಡ ಕ್ಷೇತ್ರದಿಂದ ಶಾಸಕರಾಗಿದ್ದರು. ಎರಡು ಬಾರಿ ಬಾಗಲಕೋಟೆ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡು ಬಾರಿ ಸಚಿವರಾಗಿದ್ದು, 2016 ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

 

ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮೇಟಿಯವರ ಆರೋಗ್ಯ ವಿಚಾರಿಸಿದ್ದರು. ಎಕ್ಸ್ ತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಅವರು ಮೈಸೂರಿನಿಂದ ನೇರವಾಗಿ ಜಯನಗರ ಖಾಸಗಿ ಆಸ್ಪತ್ರೆಗೆ ಆಗಮಿಸಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

 

“ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸಂತಪಾ ಸೂಚಿಸಿದ್ದಾರೆ.



“ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ತಿಳಿಸಿದ್ದಾರೆ.

 

“ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಚಿವ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪದ ನುಡಿಗಳನ್ನಾಡಿದ್ದಾರೆ.

 

“ಬಾಗಲಕೋಟೆಯ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾಗಿದ್ದ ಎಚ್. ವೈ. ಮೇಟಿ ಅವರು ಅನಾರೋಗ್ಯದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ದುಃಖವಾಯಿತು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ದೊರೆತಿತ್ತು. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST