LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಇಂದು ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಸುತ್ತಿದ್ದು, ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗಿದೆ ಅಸುನೀಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ದೃಢಪಡಿಸಿವೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಕಳೆದ ಒಂದು ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಹಿರಿಯ ರಾಜಕಾರಣಿ ಮಾಜಿ ಸಚಿವರಾಗಿಯೂ, ವೀರಶೈಔ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿಯೂ ಗುರುತಿಸಿಕೊಂಡಿದ್ದರು.

16 ಜೂನ್ 1931ರಂದು  ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದ ಶ್ಯಾಮನೂರ್ ಶಿವಶಂಕರಪ್ಪರವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇವರು, ತಾವು ಅಧಿಕಾರವನ್ನು ಸ್ವೀಕರಿಸಿದ ಕೆಲ ದಿನಗಳಲ್ಲಿ ತೋಟಗಾರಿಕಾ ಇಲಾಖೆಯೊಂದಿಗೆ ಮಲಗಿರುವ 1,000 ಕೋಟಿ ರೂಪಾಯಿಗಳನ್ನು ರಾಜ್ಯದಲ್ಲಿನ ತೋಟಗಾರಿಕಾ ಚಟುವಟಿಕೆಗಳನ್ನು ಉತ್ತೇಜಿಸಲು ಬಳಸಿದ್ದರು.

ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರು, ಇವರು ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪೂಜಿ ಎಂಜಿನಿಯರಿಂಗ್ ಅಸೋಸಿಯೇಷನ್‍ರ ಅಧ್ಯಕ್ಷರಾಗಿದ್ದಾರೆ. ಅವರು ಶಿಕ್ಷಣವಾದಿ ಮತ್ತು ಕೈಗಾರಿಕೋದ್ಯಮಿಯಾಗಿದ್ದು, ಸಕ್ಕರೆ ಮತ್ತು ಡಿಸ್ಟಿಲರೀಸ್‍ನ ವ್ಯಾಪಾರ ಮಾಡುವ ಶ್ಯಾಮನೂರ್ ಗ್ರೂಪ್ ಎಂದು ಕರೆಯಲ್ಪಡುವ ಒಂದು ಉದ್ಯಮದ ಗುಂಪನ್ನು ಹೊಂದಿದ್ದಾರೆ.



ಶಿವಶಂಕರಪ್ಪನವರು ದಕ್ಶಿಣ ದಾವಣಗೆರೆ ಜಿಲ್ಲೆಯ 2008 ಹಾಗು 2013ರ ವಿಧಾನ ಸಭಾ ಚುನಾವಣೆಯಲ್ಲಿ ಜಯವನ್ನು ಸಾಧಿಸಿ ಕಾಂಗ್ರೆಸ್ ಪಕ್ಷದ ಅತ್ಯಂತ ಅನುಭವಿ ಪ್ರತಿನಿಧಿಯಾಗಿಯೂ ಹಾಗು ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2008ರ ಚುನಾವಣೆಯಲ್ಲಿ ಶಿವಶಂಕರಪ್ಪನವರು ಬಿಜೆಪಿ ಪಕ್ಷದ ಯಶವಂತ ರಾವ್ ಜಾಧವ್ ಅವರನ್ನು ಸುಮಾರು 5500 ಮತಗಳಿಂದ ಸೋಲಿಸಿ ದಕ್ಷಿಣ ದಾವಣಗೆರೆ ಜಿಲ್ಲೆಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದರು. 2013ರ ಚುನಾವಣೆಯಲ್ಲಿಯೂ ಸಹ ಶಿವಶಂಕರಪ್ಪನವರು ಮೇಲ್ಕಂಡ ಕ್ಶೇತ್ರದಿಂದ ಸ್ಪರ್ಧಿಸಿ ಗೆಲುವಿನ ಪತಾಕೆ ಹಾರಿಸಿದ್ದರು.  ಅಂದಿನಿಂದ ಇಂದಿನವರೆಗೂ ರಾಜಕಾರಣದಲ್ಲಿ ಮುಂದುವರೆದ ಪ್ರಮುಖ ನಾಯಕರೆನಿಸಿದ್ದಾರೆ.

ಶೋಕ ಸಮುದ್ರದಲ್ಲಿ ಮುಳುಗಿದ ದಾವಣಗೆರೆ ಜಿಲ್ಲೆ

ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಹೊರಬರುತ್ತಿದ್ದಂತೆಯೇ ಕುಟುಂಬ ಸದಸ್ಯರು ಸೇರಿದಂತೆ ರಾಜಕೀಯ ಮುಖಂಡರು, ಸ್ಥಳೀಯ ಮುಖಂಡರು, ವೀರಶೈವ ಲಿಂಗಾಯತ ಮುಖಂಡರು ಶೋಕ ಸಮುದ್ರದಲ್ಲಿ ಮುಳುಗಿದ್ದಾರೆ.

ಹಲವರ ಸಂತಾಪ

ದೆಹಲಿಯಲ್ಲಿಂದು ಪ್ರತಿಭಟನಯಲ್ಲಿ ನಿರತರಾಗಿದ್ದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿ, ಜೆಡಿಎಸ್ ಮುಖಂಡರು ಕೂಡ ಸಂತಾಪ ಸೂಚಿಸಿದ್ದಾರೆ.

ದಾವಣಗೆರೆ ಧಣಿ ಎಸ್  ಎಸ್ ಎಸ್ ರವರ ನಿಧನ ತುಂಬಲಾರದ ನಷ್ಟ

ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಸಮರ್ಪಿಸಿದ ಹಿರಿಯ ರಾಜಕಾರಣಿ, ಕೈಗಾರಿಕೋದ್ಯಮಿ ಹಾಗೂ ದಾವಣಗೆರೆಯ ಧಣಿಯಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿ ಅತ್ಯಂತ ದುಃಖಕರ ಹಾಗೂ ಹೃದಯವಿದ್ರಾವಕವಾಗಿದೆ.

 

ಅವರು ರಾಜಕೀಯ, ಕೈಗಾರಿಕೆ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಮಿತ ಛಾಪು ಮೂಡಿಸಿದ ಮಹಾನ್ ವ್ಯಕ್ತಿತ್ವ. ದಾವಣಗೆರೆ ನಗರವನ್ನು ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕವಾಗಿ ರೂಪುಗೊಳಿಸುವಲ್ಲಿ ಅವರ ಪಾತ್ರ ಅನನ್ಯ. ಸರಳ ಜೀವನ, ದೃಢ ನಿರ್ಧಾರ, ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಮತ್ತು ಅಭಿವೃದ್ಧಿ ದೃಷ್ಟಿಕೋನವೇ ಅವರ ರಾಜಕೀಯ ಬದುಕಿನ ಗುರುತು.

ದೀರ್ಘಕಾಲ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿ, ಜಿಲ್ಲೆಯ ಅಭಿವೃದ್ಧಿಗೆ ಅನೇಕ ಶಾಶ್ವತ ಕೊಡುಗೆಗಳನ್ನು ನೀಡಿದವರು ಶಾಮನೂರು ಶಿವಶಂಕರಪ್ಪನವರು. ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ, ಶಿಕ್ಷಣ ಸಂಸ್ಥೆಗಳ ಬೆಳವಣಿಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅವರ ಸೇವೆ ಸದಾ ಸ್ಮರಣೀಯ. ಅವರು ದಾವಣಗೆರೆಯ ಜನತೆಗೆ ಕೇವಲ ನಾಯಕನಲ್ಲ; ಒಂದು ಯುಗದ ಪ್ರತೀಕವಾಗಿದ್ದರು.

ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಸಂಪನ್ನ ನಾಯಕನನ್ನು, ದಾವಣಗೆರೆ ಜಿಲ್ಲೆ ತನ್ನ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಈ ದುಃಖದ ಘಳಿಗೆಯಲ್ಲಿ ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಹಾಗೂ ದಾವಣಗೆರೆ ಜಿಲ್ಲೆಯ ಸಮಸ್ತ ಜನತೆಗೆ ಈ ನಷ್ಟವನ್ನು ಸಹಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇವೆ.

ಪರಮಾತ್ಮ ಅವರ ಆತ್ಮಕ್ಕೆ ಶಾಂತಿ ನೀಡಲಿ.

ಭಾವಪೂರ್ಣ ಶ್ರದ್ಧಾಂಜಲಿ.

 ಡಾ ವೆಂಕಟೇಶ್ ಬಾಬು ಎಸ್ , ಅಧ್ಯಕ್ಷರು ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆ 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST