LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯ ಕಲಿಕೆಗೆ ಆದ್ಯತೆ ನೀಡಿ: ಪ್ರೊ.ಎನ್.ಎಂ.ಸಾಲಿ

ಬಳ್ಳಾರಿ :  ಪ್ರಸ್ತುತ ದಿನಮಾನಗಳಲ್ಲಿ ಔದ್ಯೋಗಿಕ ರಂಗದಲ್ಲಿ ವಿಷಯ ಜ್ಞಾನದ ಜೊತೆಗೆ ಕೌಶಲ್ಯ ಆಧಾರಿತ ಕಲಿಕೆಗೆ ಒತ್ತು ನೀಡುವುದರಿಂದ ವಿದ್ಯಾರ್ಥಿಗಳು ತಮಗೆ ಬೇಕಾದ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಂ. ಸಾಲಿ ಅವರು ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೭ ದಿನಗಳ ಕಾಲ ಆಯೋಜಿಸಿರುವ ವಿದ್ಯಾರ್ಥಿಗಳ ಕಲಿಕಾ ಪುಷ್ಟೀಕರಣ ಕಾರ್ಯಕ್ರಮ ಹಾಗೂ ಅಧ್ಯಾಪಕದ ಅಭಿವೃದ್ಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಈ ಮಾದರಿ ಕಾರ್ಯಕ್ರಮಗಳು ಅವರ ನ್ಯೂನತೆ ಅರಿತುಕೊಳ್ಳಲು ಮತ್ತು ಸಾಮರ್ಥ್ಯ ವೃದ್ಧಿಸಿಕೊಳ್ಳಲು ಅನುಕೂಲವಾಗುತ್ತವೆ ಎಂದರು.

ಬೆಂಗಳೂರಿನ ಲಿವಿ ಲರ್ನಿಂಗ್ ಸೆಂಟರ್‌ನ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ಪ್ರೊ.ವಿನೋದ್ ಕುಮಾರ್ ಮೂರ್ತಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ಕಾಲಮಾನದಲ್ಲಿ ಇಂದು ಅನೇಕ ನೌಕರರು ಕೌಶಲ್ಯಯುತ ಕಲಿಕೆ ಇಲ್ಲದೆ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸಾಂಪ್ರದಾಯಿಕ ಕಲಿಕೆಯ ಜೊತೆಯಲ್ಲಿ ಕೌಶಲ್ಯಯುತ ಶಿಕ್ಷಣ ಇಂದಿನ ಆದ್ಯತೆಯಾಗಿದ್ದು, ವಿದ್ಯಾರ್ಥಿಗಳು ಇವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.



ಕಾರ್ಯಕ್ರಮದ ಸಂಯೋಜಕರು ಹಾಗೂ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ.ಉದಯ್ ಕುಮಾರ್ ಖಡ್ಕೆ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ೭ ದಿನಗಳ ರೂಪುರೇಷೆಗಳ ಹಾಗೂ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರಥಮ ದಿನದ ವಿಷಯದ ಭಾಗವಾಗಿ ವಿವಿಯ ವಾಣಿಜ್ಯಶಾಸ್ತ್ರ, ನಿರ್ವಹಣಾಶಾಸ್ತ್ರ, ಎಂಸಿಎ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



ಚೆನ್ನೈನ ಸಿಎಸ್‌ಐಆರ್-ಎನ್‌ಎಂಎಲ್ ಮದ್ರಾಸ್ ಕೇಂದ್ರದ ಮಾಜಿ ವಿಜ್ಞಾನಿಗಳಾದ ಪ್ರೊ.ಟಿ.ವಿ ವಿಜಯಕುಮಾರ್, ತಾಂತ್ರಿಕ ಗೋಷ್ಠಿಯ ಸಹಾಯಕ ವೃಂದದ ಪ್ರೊ.ಜೀಲನ್ ಬಾಷಾ, ಪ್ರೊ ಸದ್ಯೋಜಾತಪ್ಪ ಸೇರಿದಂತೆ ವಿವಿಯ ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST